ಶ್ರೀನಗರ: ಹಿಜಬ್ ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ್ ಮುಫ್ತಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಒಂದು ಕಡೆ ನಾವು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತೇವೆ. ಆದರೆ ನಾವು ಅವರಿಗೆ ಸರಳ ಆಯ್ಕೆಯ ಹಕ್ಕನ್ನು ನಿರಾಕರಿಸುತ್ತಿದ್ದೇವೆ. ಇದು ಕೇವಲ ಧರ್ಮದ ಬಗ್ಗೆ ಅಷ್ಟೇ ಅಲ್ಲ, ಆಯ್ಕೆ ಮಾಡುವ ಸ್ವಾತಂತ್ರ್ಯದ ವಿಚಾರದಲ್ಲೂ ಕೂಡ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ವಕ್ಫ್ ಬೋರ್ಡ್ ಅಧ್ಯಕ್ಷ
Advertisement
Advertisement
ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವುದು ಭ್ರಮಾತ್ಮಕ ಘೋಷಣೆಯಾಗಿ ಉಳಿದಿದೆ. ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗುತ್ತಿದೆ ಎಂದು ಮುಫ್ತಿ ಅವರು ಈ ಹಿಂದೆಯೂ ಟ್ವೀಟ್ ಮಾಡಿ ಕರಾವಳಿಯಲ್ಲಿ ಎದ್ದಿದ್ದ ಹಿಜಬ್ ವಿವಾದ ಕುರಿತು ಕಿಡಿಕಾರಿದ್ದರು.
Advertisement
Karnataka HC’s decision to uphold the Hijab ban is deeply disappointing. On one hand we talk about empowering women yet we are denying them the right to a simple choice. Its isn’t just about religion but the freedom to choose.
— Mehbooba Mufti (@MehboobaMufti) March 15, 2022
Advertisement
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದಲ್ಲಿ ಹಿಜಬ್ ವಿವಾದ ಕುರಿತು ಇಂದು ತೀರ್ಪು ಪ್ರಕಟಿಸಲಾಯಿತು. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.