ಬೆಂಗಳೂರು: ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಮತ್ತೆ ರಿಲೀಫ್ ಸಿಕ್ಕಿದೆ. ಅನಿರ್ಧಿಷ್ಟಾವಧಿ ವರೆಗೆ ತೀರ್ಪು ಕಾಯ್ದಿರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಇಂದು ನಡೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದ್ದಾರೆ. ಮುಂದಿನ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಯಲಿದೆ. ಇದನ್ನೂ ಓದಿ: ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂ
Advertisement
Advertisement
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಗುರುವಾರ ಹೈಕೋರ್ಟ್ನಲ್ಲಿ ನಡೆಯಿತು.