ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯೋದು ಬಹುತೇಕ ಖಚಿತವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಮಾರ್ಪಾಡು ಮಾಡಿರುವ ವಿಭಾಗೀಯ ಪೀಠ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರಕ್ಕೆ ಬಿಟ್ಟಿದೆ.
ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬಹುದು. ಗಣೇಶೋತ್ಸವ ಮಾಡಬಹುದು. ಆದರೆ ಈ ಬಗ್ಗೆ ಅನುಮತಿ ನೀಡೋದು ಬಿಡೋದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಗಣೇಶೋತ್ಸವಕ್ಕೆ ಒಂದು ದಿನ ಮಾತ್ರ ಅವಕಾಶ ನೀಡಬಹುದು ಎಂದು ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಕೋರ್ಟ್ ಕೂಡ ಇದೇ ವಿಚಾರವನ್ನು ಪ್ರಸ್ತಾಪ ಮಾಡಿದೆ. ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್
ಪಾರ್ಟಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಬಹುದು ಎಂದು ಕೂಡ ಹೈಕೋರ್ಟ್ ತಿಳಿಸಿದೆ. ಆದರೆ ನಾಳೆಯಿಂದ ಗುರುವಾರದವರೆಗೆ ಕೋರ್ಟ್ ರಜೆ ಇರುವ ಕಾರಣ, ವಕ್ಫ್ ಬೋರ್ಡ್ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಇವೆ. ಚಾಮರಾಜಪೇಟೆ ಮೈದಾನ ಮಾಲೀಕತ್ವ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೊರೆ ಹೋಗಿತ್ತು.ಇದನ್ನೂ ಓದಿ: ಹೆಚ್‌ಡಿಕೆ ರಾಜಕೀಯ ಸ್ಟಂಟ್ ಮಾಡಿದರೆ ಉಪಯೋಗವೇನು – ಸಚಿವ ಸುಧಾಕರ್ ಪ್ರಶ್ನೆ
ಒಂದು ದಿನದ ಮಟ್ಟಿಗಾದ್ರೂ ಗಣೇಶೋತ್ಸವಕ್ಕೆ ಅನುಮತಿಸಿ. ಈ ಬಗ್ಗೆ ಅರ್ಜಿಗಳು ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಕಾಣಬೇಕಿದೆ. ಎರಡು ಸಮುದಾಯಗಳ ಹಿತಾಸಕ್ತಿ ಪರಿಗಣಿಸಿ ತೀರ್ಪು ನೀಡಬೇಕು ಎಂದು ಎಜಿ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ರು. ಇದಕ್ಕೆ ಹೈಕೋರ್ಟ್ ಕೂಡ ಸ್ಪಂದಿಸಿತು. ಹೈಕೋರ್ಟ್ ತೀರ್ಪಿಗೆ ಸಚಿವ ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ. ಕೋರ್ಟ್ ತೀರ್ಪು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸರ್ಕಾರ ಒಂದು ದಿನದ ಮಟ್ಟಿಗೆ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮತ್ತು ಹಿಂದೂ ಸಂಘಟನೆಗಳು ಈ ಬೆಳವಣಿಗೆಯಿಂದ ಖುಷಿ ಆಗಿವೆ. ಕೋರ್ಟ್ ಆದೇಶ ಪೊಲೀಸ್ ಆಯುಕ್ತರು ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.