ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ನಟ ದರ್ಶನ್ (Darshan) ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಇದನ್ನೂ ಓದಿ: It’s Too Much, ಬೆಡ್ ರೂಮ್‌ವರೆಗೆ ಬಂದಿದ್ದು ಸರಿಯಲ್ಲ – ಪೊಲೀಸರ ವಿರುದ್ಧ ಅಲ್ಲು ಅರ್ಜುನ್ ಗರಂ
Advertisement
Advertisement
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ನಡುವೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ನಟನನ್ನು ಶಿಫ್ಟ್ ಮಾಡಲಾಗಿತ್ತು.
Advertisement
ಬೆನ್ನು ನೋವಿನ ಕಾರಣ ನಟನಿಗೆ ಶಸ್ತ್ರಚಿಕಿತ್ಸೆ ಅಗತ್ಯತೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಈಚೆಗೆ ಬಿಡುಗಡೆ ಮಾಡಲಾಗಿತ್ತು. ಸದ್ಯ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದನ್ನೂ ಓದಿ: Allu Arjun | ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್
Advertisement
ಈ ನಡುವೆ ಜಾಮೀನಿಗಾಗಿ ದರ್ಶನ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಗುರುವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಈಗ ಜಾಮೀನು ಮಂಜೂರಾಗಿದೆ.
ಇತ್ತ ತಮ್ಮ ಪುತ್ರಿ ಪವಿತ್ರಾ ಗೌಡಗೆ ಜಾಮೀನು ಸಿಗುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟರು. ಮಗಳಿಗೆ ಜಾಮೀನು ಸಿಕ್ಕಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.