ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ (KR Nagara Kidnap Case) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ.
ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ.
ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ಭವಾನಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಈ ಆದೇಶ ಅಮಾನತಿನಲ್ಲಿ ಇಡಲಾಗಿದೆ ಎಂದು ಹೇಳಿದ ಹೈಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.