– ಪಾದಯಾತ್ರೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಆದೇಶ
ಬೆಂಗಳೂರು: ಮುಡಾ, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.
Advertisement
ಪಾದಯಾತ್ರೆಗೆ ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಇದರ ಜೊತೆಗೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
Advertisement
Advertisement
ಪಾದಯಾತ್ರೆಗೆ ಸರ್ಕಾರದಿಂದ ಅಧಿಕೃತ ಅನುಮತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ಕೊಟ್ಟಿದ್ದರು. ಈ ಬೆನ್ನಲ್ಲೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸರ್ಕಾರಕ್ಕೆ ಅನುಮತಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement
ಪಿ.ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್ ಗೌಡರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆ ಸಾಗುವ ಜಾಗದಲ್ಲಿ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಎಸ್ಪಿಗೆ ಕೋರ್ಟ್ ಸೂಚನೆ ನೀಡಿದೆ.