ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.
Advertisement
ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ ಸೇನೆ
Advertisement
Advertisement
ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್ ಮೇಯರ್ ಬಿಡುಗಡೆ