ಬೆಂಗಳೂರು: ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆಯನ್ನು ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು (Law) ಪಾಲಿಸಬೇಕು ಎಂದು ಹೈಕೋರ್ಟ್ (High Court) ಸಿದ್ದರಾಮಯ್ಯ (Siddaramaiah) ಮತ್ತು ಇತರ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿ 10,000 ರೂ. ದಂಡ ವಿಧಿಸಿದೆ.
ಪ್ರತಿಭಟನೆ (Protest) ನಡೆಸಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ನಾಯಕರ (Congress Leaders) ವಿರುದ್ಧ ಕೇಸ್ ದಾಖಲಾಗಿತ್ತು. ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಮಾರ್ಚ್ 6 ರಂದು ಖುದ್ದು ಸಿದ್ದರಾಮಯ್ಯ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ಪ್ರಕಟಿಸಿದೆ.
Advertisement
Advertisement
ಎಲ್ಲಾ ಆರೋಪಿಗಳಿಗೆ 10 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದೆ. ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ
Advertisement
ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪಿಎಸ್ ಐ ಕು.ಜಹಿದಾ ಹೈಗ್ರೌಂಡ್ಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದರು. ಪ್ರಕರಣದಲ್ಲಿ ಅವರನ್ನು ಅನಗತ್ಯವಾಗಿ ಎಳೆದು ತಂದು ಪ್ರತಿವಾದಿಯನ್ನಾಗಿ ಕಾಂಗ್ರೆಸ್ ಮಾಡಿದ್ದಕ್ಕೆ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ.
Advertisement
ಈ ವೇಳೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಲು ಸಿದ್ದರಾಮಯ್ಯ ಪರ ವಕೀಲರು ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಕೋರ್ಟ್ ಜನಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಜನರು ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಟು ಪದಗಳನ್ನು ಬಳಸಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಖ್ಯಾತ ಹಾಕಿ ಆಟಗಾರನಿಂದ ಅಪ್ರಾಪ್ತೆಯ ಮೇಲೆ ರೇಪ್!
ಏನಿದು ಪ್ರಕರಣ?
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ (KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು . ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್ (NBW) ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.