ಬೆಂಗಳೂರು: ಕರ್ನಾಟಕ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಮಂಜೂರಾತಿ ಸಂಖ್ಯೆ 62. ಹಾಲಿ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ನೂತನವಾಗಿ ಮೂರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇರ್ಪಡೆಯಿಂದ ಈ ಸಂಖ್ಯೆ 46ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಕರ್ನಾಟಕದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ