ಬೆಂಗಳೂರು: ಈ ವರ್ಷಾಂತ್ಯದ ಒಳಗಡೆ ಬಿಬಿಎಂಪಿ (BBMP) ಚುನಾವಣೆ (Election) ನಡೆಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ (Karnataka High Court) ಆದೇಶಿಸಿದೆ.
Advertisement
ಮೀಸಲಾತಿ (Reservation) ಸರಿಪಡಿಸಲು 16 ವಾರ ಬೇಕೆಂದ ಸರ್ಕಾರದ ವಿರುದ್ಧ ಗರಂ ಆದ ಕೋರ್ಟ್ ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಚಾಟಿ ಬೀಸಿದೆ. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ- ಆರ್.ಅಶೋಕ್
Advertisement
Advertisement
ಬಿಬಿಎಂಪಿ ಮೀಸಲಾತಿ ವಿಚಾರವಾಗಿ ಮೀಸಲಾತಿ ಸರಿಪಡಿಸಲು 4 ತಿಂಗಳು ಕಾಲಾವಕಾಶ ಬೇಕೆಂದು ಸರ್ಕಾರ ಕೋರ್ಟ್‍ಗೆ ಮನವಿ ಸಲ್ಲಿಸಿತ್ತು. ಬಿಬಿಎಂಪಿ ಮೀಸಲಾತಿ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರ ಪೀಠ, ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಅಸಮಾಧಾನ ಹೊರಹಾಕಿ ಪ್ರಮಾಣಪತ್ರಕ್ಕೆ ಪ್ರತಿಕ್ರಿಯೆ ನೀಡಲು ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದ್ದು, 2 ತಿಂಗಳ ಒಳಗಾಗಿ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿ ಎಂದು ಆದೇಶಿಸಿದೆ.
Advertisement
ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಸರಿಪಡಿಸಿಕೊಳ್ಳಲು ಅವಕಾಶ ನೀಡಬೇಕು. ನವೆಂಬರ್ 30 ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು. ನವೆಂಬರ್ 30 ರಿಂದ ಡಿಸೆಂಬರ್ 31 ರವರೆಗೆ ಚುನಾವಣೆ ಪ್ರಕ್ರಿಯೆ ಮುಗಿಯಬೇಕು. ಚುನಾವಣಾ ಪ್ರಕ್ರಿಯೆಗೆ 30 ದಿನ ಕಾಲಾವಕಾಶ ನೀಡಬೇಕು. ವರ್ಷದ ಅಂತ್ಯದ ಒಳಗೆ ಚುನಾವಣೆ ಮುಕ್ತಾಯಗೊಳಿಸಿ ಎಂದು ಸರ್ಕಾರಕ್ಕೆ ಡೆಡ್‍ಲೈನ್ ನೀಡಿದೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್
ಗುರುವಾರ ಒಬಿಸಿ ಅಂಕಿ ಅಂಶ ಒದಗಿಸಿ ಹೊಸದಾಗಿ ಮೀಸಲು ನಿಗದಿ ಸಾಧ್ಯವೇ? ಹೊಸದಾಗಿ ಮೀಸಲು ನಿಗದಿಪಡಿಸಲು ಎಷ್ಟು ಕಾಲಾವಕಾಶ ಬೇಕು? ಎಂಬ ಬಗ್ಗೆ ನಿಲುವು ತಿಳಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಇಂದು ಈ ಬಗ್ಗೆ ವಿಚಾರಣೆ ಮುಂದುವರಿಸಿ 2 ತಿಂಗಳ ಒಳಗಾಗಿ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿ ಎಂದು ಸರ್ಕಾರಕ್ಕೆ ಆದೇಶಿಸಿದೆ.