ಬೆಂಗಳೂರು: ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರ ವಿರುದ್ಧದ ಲೋಕಾಯುಕ್ತ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.
ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುವಾಗ ಸಭಾಧ್ಯಕ್ಷರ ಅನುಮತಿಯನ್ನು ಪಡೆದುಕೊಂಡಿಲ್ಲ. ಕೆಲವೊಂದು ತಾಂತ್ರಿಕ ಅಂಶಗಳನ್ನು ಪ್ರಕರಣದ ತನಿಖೆಯಲ್ಲಿ ಪಾಲನೆಯನ್ನು ಮಾಡಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: ಪ್ರಿಯಾಂಕಾ ಖರ್ಗೆ ಧರ್ಮ ದ್ರೋಹಿ, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಗೌರವ ಇದೆ: ಈಶ್ವರಪ್ಪ
Advertisement
Advertisement
ಸುದೀರ್ಘವಾದ ವಿಚಾರಣೆ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್‌ಗಾಗಿ ಲಂಚ ಪಡೆದ ಆರೋಪ ಹೊರಿಸಿದ್ದ ಪ್ರಕರಣವನ್ನು ರದ್ದು ಮಾಡಿ ಆದೇಶ ನೀಡಿದೆ.
Advertisement
ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದರು. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಬಿಗ್ ರಿಲೀಫ್ – ಎಂಎಲ್‌ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
Advertisement
ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಶಾಸಕರ ಕಚೇರಿ ಮತ್ತು ಮನೆಯಲ್ಲಿ 8 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿತ್ತು.