– ನಾಳೆ ನಡೆಯಲಿದೆ ಮಹತ್ವದ ಸಭೆ
ಬೆಂಗಳೂರು: ಸಿಇಟಿ ರ‍್ಯಾಂಕ್ ರದ್ದು ಮಾಡಿದ ಹೈಕೋರ್ಟ್ ತೀರ್ಪಿನ ವಿಚಾರವಾಗಿ ಚರ್ಚೆ ನಡೆಸಲು ಸೋಮವಾರ ಮಹತ್ವದ ಸಭೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕರೆದಿದ್ದಾರೆ.
Advertisement
ವಿಕಾಸಸೌಧದಲ್ಲಿ ನಾಳೆ ಸಭೆ ನಡೆಸಲಿದ್ದು, ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಹೈಕೋರ್ಟ್ ಆದೇಶದ ಕುರಿತು ಚರ್ಚೆ ನಡೆಯಲಿದೆ.
Advertisement
ಹೈಕೋರ್ಟ್ ಆದೇಶದಂತೆ ಹೊಸ ಸಿಇಟಿ ರ‍್ಯಾಂಕ್ ಘೋಷಣೆ ಮಾಡಬೇಕಾ? ಅಥವಾ ಮೇಲ್ಮನವಿ ಹೋಗಬೇಕೇ ಎಂಬುದರ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚೆ ಆಗಲಿದೆ. ನಾಳೆಯ ಸಭೆಯಲ್ಲಿ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆಯಲು ತೀರ್ಮಾನ ಮಾಡಲಾಗಿದೆ.
Advertisement
Advertisement
ಏನಿದು ಪ್ರಕರಣ?
ಕೋವಿಡ್ ಕಾರಣದಿಂದ 2020– 21ನೇ ಸಾಲಿನಲ್ಲಿ ಪಿಯು ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಉತ್ತೀರ್ಣಗೊಂಡ ವಿದ್ಯಾರ್ಥಿಗಳಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಪಡೆದ 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿಯ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ನಡೆದ ಸಿಇಟಿ ಬರೆದಿದ್ದರು. ಇದನ್ನೂ ಓದಿ: ಯೋಗಿಜೀ ಇನ್ನು ಮುಂದೆ ತಪ್ಪು ಮಾಡಲ್ಲ, ಪ್ಲೀಸ್ ಕ್ಷಮಿಸಿ ಬಿಡಿ: ಗೋಳಾಡಿದ ಆರೋಪಿ
ಈ ಬಾರಿ ಪಿಯು ಪರೀಕ್ಷೆ ಬರೆದಿದ್ದ 3 ಲಕ್ಷಕ್ಕೂ ಅಧಿಕ ಮಂದಿ ಸಿಇಟಿ ಪರೀಕ್ಷೆ ಬರೆದಿದ್ದರು. ಈ ಕಾರಣಕ್ಕೆ ಸರ್ಕಾರ ಪಿಯು ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಮಾತ್ರ ಪರಿಗಣಿಸಿ ರ‍್ಯಾಂಕ್ ನೀಡಿತ್ತು. ಒಂದು ವೇಳೆ ಪುನಾರವರ್ತಿತ ವಿದ್ಯಾರ್ಥಿಗಳ ಪಿಯು ಅಂಕಗಳನ್ನು ಪರಿಗಣಿಸಿದರೆ 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ ಎಂದು ಸರ್ಕಾರ ವಾದಿಸಿತ್ತು.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪುನಾರವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಇಟಿ-2022ರ ಮೌಲ್ಯಮಾಪನವು ಪುನರಾವರ್ತಿತ ವಿದ್ಯಾರ್ಥಿಗಳಿಗೆ ತಾರತಮ್ಯ ಎಸಗಿದೆ. ಸರ್ಕಾರದಿಂದ ನಮಗೆ ಅನ್ಯಾಯವಾಗಿದೆ ಎಂದು ಚಿಕ್ಕಮಗಳೂರಿನ ಆರ್. ಈಶ್ವರ್ ಸೇರಿದಂತೆ 50 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2022 ಜುಲೈ 30ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ.50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಕೆಇಎಗೆ ಸೂಚಿಸಿದೆ. ಅಷ್ಟೇ ಅಲ್ಲದೇ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006ರ ಅನುಸಾರ ರಿ–ಡೂ ಮಾಡಬೇಕು ಎಂದು ಕೋರ್ಟ್ ಹೇಳಿದೆ.