ಬೆಂಗಳೂರು: ಸೈನೆಡ್ ಮೋಹನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೆಳ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿ ಜೀವಾವಧಿ ಶಿಕ್ಷೆಗೆ ಇಳಿಸಿದೆ.
ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ ವಿಭಾಗೀಯ ಪೀಠ, ಸೈನೆಡ್ ಮೋಹನ್ ಕುಮಾರ್ ಸಮಾಜಕ್ಕೆ ಮಾರಕ. ಹೀಗಾಗಿ ಈತ ಸಾಯುವವರೆಗೂ ಜೈಲಿನಲ್ಲಿರಬೇಕು ಎಂದು ಆದೇಶ ನೀಡಿದರು.
Advertisement
20 ಯುವತಿಯರನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಸೈನೆಡ್ ನೀಡಿ ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮೋಹನ್ ಕುಮಾರ್‍ಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2013ರ ಡಿಸೆಂಬರ್ 21ರಂದು ಗಲ್ಲುಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿದ್ದ ಮೋಹನ್ ಕುಮಾರ್‍ಗೆ ಹೈಕೋರ್ಟ್ ರಿಲೀಫ್ ನೀಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ.
Advertisement
ತಾನೇ ವಾದಿಸಿದ್ದ:
ವಿಚಾರಣೆ ವೇಳೆ ನನ್ನ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಇಲ್ಲ. ನಾನು ಅತ್ಯಾಚಾರ ನಡೆಸಿದ್ದಕ್ಕೆ ಪುರಾವೆಯೇ ಇಲ್ಲ. ನಾನು ಸೈನೆಡ್ ತಿನ್ನಿಸಿ ಸಾಯಿಸಿದ್ದೇನೆ ಎಂದು ವಕೀಲರು ವಾದಿಸಿದ್ದಾರೆ. ಆದರೆ ಪ್ರಯೋಗಾಲಯದಲ್ಲಿ ನಾನು ನಾನು ಸೈನೆಡ್ ನೀಡಿ ಕೊಲೆ ಮಾಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಸೈನೆಡ್ ಸೇವಿಸಿದ್ದರೆ ಹೃದಯ ಬಡಿತ ನಿಂತುಹೋಗಿ ನರಗಳು ಹೆಪ್ಪುಗಟ್ಟಿ ಸಾವನ್ನಪ್ಪುತ್ತಾರೆ. ಆದರೆ ವರದಿಯಲ್ಲಿ ಈ ಯಾವುದೇ ವಿವರಗಳು ಇಲ್ಲ ಎಂದು ವಾದಿಸಿದ್ದ.
Advertisement
ಸುಮಾರು 25ಕ್ಕೂ ಹೆಚ್ಚು ಖಾಲಿ ಪೇಪರ್ ಗಳಿಗೆ ನನ್ನ ಸಹಿ ಮಾಡಿಸಿಕೊಂಡು ಪೊಲೀಸರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನೀಡಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದ.
Advertisement
2004ರಿಂದ 2009ರ ಅವಧಿಯಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಸೈನೆಡ್ ಮೋಹನ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ವಾದಿಸಿದ್ದರು. ಬಂಟ್ವಾಳ ಮೂಲದ ಶಿಕ್ಷಕನಾದ ಮೋಹನ್ 2002ರಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದ.