ಬೆಂಗಳೂರು: ನವೆಂಬರ್ 10 ರಂದು ರಾಜ್ಯ ಸರ್ಕಾರದ ವತಿಯಿಂದ ಆಯೋಜನೆಗೊಂಡಿರುವ ಟಿಪ್ಪು ಜಯಂತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸುವಂತೆ ಕೋರಿ ಕೊಡಗಿನ ಕೆ.ಪಿ. ಮಂಜುನಾಥ್ ಎಂಬವರು ಹೈ ಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‍ನ ಹಂಗಾಮಿ ಸಿಜೆ ವಿಭಾಗೀಯ ಪೀಠವು ತಡೆ ನೀಡಲು ನಿರಾಕರಿಸಿದೆ.
Advertisement
ವಿಚಾರಣೆ ವೇಳೆ ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ? ಅಥವಾ ಈ ಹಿಂದೆ ಆಚರಣೆ ರದ್ದು ಪಡಿಸಿರುವ ಕುರಿತು ಸುಪ್ರೀಂ ಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ ಎಂದು ಅರ್ಜಿದರರನ್ನು ಪ್ರಶ್ನಿಸಿದೆ.
Advertisement
ಟಿಪ್ಪು ಜಯಂತಿ ಆಚರಣೆಗೆ ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ. ಇದೊಂದು ದೊಡ್ಡ ವಿಚಾರವಾಗಿದ್ದು, ಸಮಗ್ರವಾಗಿ ವಿಚಾರಣೆ ನಡೆಯ ಬೇಕಿದೆ ಎಂದು ನ್ಯಾಯ ಪೀಠವು ಅಭಿಪ್ರಾಯಪಟ್ಟಿದೆ.
Advertisement
ವರ್ಷ ಟಿಪ್ಪು ಜಯಂತಿ ವೇಳೆ ಕೊಡಗಿನ ಅಹಿತಕರ ಘಟನೆ ನಡೆದಿದೆ. ಹೀಗಾಗಿ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಪಿಐಎಲ್‍ನಲ್ಲಿ ಮನವಿ ಮಾಡಿದ್ದರು.
Advertisement