ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Public TV
1 Min Read
PRAJWAL REVANNA

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ (High Court) ವಜಾಗೊಳಿಸಿದೆ.

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಕಂಬಳವನ್ನು ನಿಲ್ಲಿಸಿ: ಪೇಟಾದಿಂದ ಪಿಐಎಲ್‌ ಸಲ್ಲಿಕೆ

HIGH COURT

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಎಂದ ರಾಹುಲ್‌ಗೆ ರಿಲೀಫ್‌ – ಅರ್ಜಿ ವಜಾ, 25 ಸಾವಿರ ದಂಡ

ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

 

Share This Article