ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಪ್ರಕರಣದ (Disproportionate Asset Case) ತನಿಖೆಯನ್ನು ಪೂರ್ಣಗೊಳಿಸಿ ಚಾರ್ಜ್‌ಶೀಟ್ (Chargesheet) ಅನ್ನು 3 ತಿಂಗಳ ಒಳಗಡೆ ಸಲ್ಲಿಸಬೇಕೆಂದು ಹೈಕೋರ್ಟ್ ಸಿಬಿಐಗೆ ಸೂಚಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ (CBI) ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ. ಇದನ್ನೂ ಓದಿ: ಡಿಕೆಶಿ ಮೆರವಣಿಗೆ ನೋಡಿ ಕೇಸ್ ಖುಲಾಸೆ ಅಂದ್ಕೊಂಡಿದ್ದೆ: ಕೆ.ಎಸ್ ಈಶ್ವರಪ್ಪ
Advertisement
Advertisement
ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ (High Court) ಕೆ ನಟರಾಜನ್ ಅವರ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಜಾ ಮಾಡುವಾಗ ಕೆಲವೊಂದು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.
Advertisement
ಕೋರ್ಟ್ ಹೇಳಿದ್ದೇನು?
ಅರ್ಜಿದಾರ ಡಿಕೆ ಶಿವಕುಮಾರ್ ಅರ್ಜಿಯನ್ನು ತುಂಬಾ ವಿಳಂಬವಾಗಿ ಸಲ್ಲಿಸಿದ್ದಾರೆ. ಈಗಾಗಲೇ ತನಿಖೆ ಕೊನೆಯ ಹಂತದಲ್ಲಿ ಇದ್ದು, ಕೆಲವೇ ದಿನದಲ್ಲಿ ಪ್ರಕರಣದ ತನಿಖೆ ಸಂಪೂರ್ಣ ಮಾಡುತ್ತೇವೆ ಎಂದು ಹೇಳಿದೆ. ಈ ಹಂತದಲ್ಲಿ ಪ್ರಕರಣಕ್ಕೆ ತಡೆ ನೀಡುವುದು ಸರಿಯಲ್ಲ.
Advertisement
ಇನ್ನು ತನಿಖೆ ವಿಳಂಬ ಆಗಿದ್ದರೆ ತನಿಖೆ ಚುರುಕುಗೊಳಿಸಿ ಎಂದು ನಿರ್ದೇಶನ ನೀಡಬಹುದು. ಸಿಬಿಐ ದೋಷಾರೋಪ ಪಟ್ಟಿ ಹಾಕಿದ ಬಳಿಕವೂ ನೂನ್ಯತೆಗಳು ಇದ್ದರೆ ಅರ್ಜಿ ಸಲ್ಲಿಸಬಹುದು.
ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ತನಿಖೆಗೆ ತಡೆ ಕೋರಿ ಡಿಕೆಶಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
Web Stories