ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA) ಅಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಹೈಕೋರ್ಟ್(High Court) ತೀರ್ಪು ಕಾಯ್ದಿರಿಸಿದೆ.
ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!
ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ಪಿಎಫ್ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದ್ದು, ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಸಂಘಟನೆಯ ಕಾರ್ಯಕರ್ತರು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.