ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ವಿಧಿವಶರಾಗಿದ್ದಾರೆ.
Advertisement
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ
Advertisement
ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.
Advertisement
Advertisement
ಜಸ್ಟೀಸ್ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು. 2000ರ ಡಿ.11 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2001ರ ಅ.27 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಇದನ್ನೂ ಓದಿ: ಕೊರೊನಾದಿಂದ ತಮ್ಮ ಮದುವೆಯನ್ನೇ ರದ್ದುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ