ಹೆಚ್‌ಡಿಕೆಗೆ ಹೈಕೋರ್ಟ್‌ ರಿಲೀಫ್‌; ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ತಡೆ

Public TV
1 Min Read
HDK 2 1

ಬೆಂಗಳೂರು: ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ವಿರುದ್ಧ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ (High Court) ತಡೆ ನೀಡಿದೆ.

ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಾ ಇದ್ದಾರೆ ಎಂದು ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸ್ಪಷ್ಟನೆ ಕೋರಿ ಮಹಿಳಾ ಆಯೋಗ (Women Commission) ನೋಟಿಸ್‌ ನೀಡಿತ್ತು. ಆಯೋಗದ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಕೇರಳದ ರೀತಿ ರಾಜ್ಯದಲ್ಲೂ ಲವ್ ಜಿಹಾದ್ ನಡೀತಿದೆ ಅಂದಿದ್ವಿ: ಆರ್.ಅಶೋಕ್

HIGHCOURT

ದೂರುಗಳಿಲ್ಲದಿದ್ದರೂ ಸ್ವಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ನೋಟಿಸ್ ನೀಡಲಾಗಿದೆ. ಸೆಕ್ಷನ್ 7 ಕ್ಕೆ ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಪರ ವಕೀಲ ನಿಶಾಂತ್ ಎ.ವಿ. ವಾದ ಮಂಡಿಸಿದ್ದರು.

ಕಾರಣ ಕೇಳಿ ನೋಟಿಸ್ ನೀಡಿಲ್ಲ, ಸಮನ್ಸ್ ನೀಡಿಲ್ಲ. ಸ್ಷಷ್ಟೀಕರಣ ನೀಡಿ, ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ. ಇದನ್ನೂ ಓದಿ: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

Share This Article