ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು (Siddaramaiah) ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್‍ಗೆ (Ashwath Narayan) ಹೈಕೋರ್ಟ್ (High Court) ತಾತ್ಕಾಲಿಕ ರಿಲೀಫ್ ನೀಡಿದೆ.
ಮೊನ್ನೆ ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ (FIR) ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್‍ನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಶ್ವಥ್‍ನಾರಾಯಣ್ ವಿರುದ್ಧದ ಎಫ್‍ಐಆರ್‌ಗೆ ಸಂಬಂಧಿಸಿದ ತನಿಖೆಗೆ ನಾಲ್ಕು ವಾರ ತಡೆ ನೀಡಿ ಆದೇಶ ನೀಡಿದೆ.
Advertisement
Advertisement
ಅಶ್ವಥ್‍ನಾರಾಯಣ್ ವಿರುದ್ಧದ ತನಿಖೆಗೆ ನಾಲ್ಕು ವಾರ ತಡೆ ನೀಡಲಾಗಿದ್ದು, ಅಷ್ಟರೊಳಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: 10 ಕೆಜಿ ಉಚಿತ ಅಕ್ಕಿ – ಸರ್ಕಾರದ ಲೆಕ್ಕಾಚಾರ ಏನು?
Advertisement
ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ಹಾಜರಾಗಿ, ಮೊದಲೆರಡು ದೂರುಗಳನ್ನು ಎನ್‍ಸಿಆರ್ ಹಾಕಿ ಮುಕ್ತಾಯ ಮಾಡಿರುವುದಕ್ಕೆ ಪೊಲೀಸರು ಮಾಹಿತಿ ಕೊಡಬೇಕು. ಸರ್ಕಾರ ಬದಲಾದ ಮಾತ್ರಕ್ಕೆ ರಾತ್ರೋರಾತ್ರಿ ಏನು ಬದಲಾವಣೆ ಆಗಿದೆ. ಪೊಲೀಸರು ಈ ರೀತಿ ನಡೆದುಕೊಳ್ಳಲಾಗದು ಎಂದು ಆಕ್ಷೇಪಿಸಿದರು. ಈ ವಾದಕ್ಕೆ ರಾತ್ರೋರಾತ್ರಿ ಏನು ಬದಲಾಗಿದೆ ಎಂದು ನೀವು ಕೇಳುವಂತಿಲ್ಲ ಎಂದು ಲಘುಧಾಟಿಯಲ್ಲಿ ನ್ಯಾಯಪೀಠ ಹೇಳಿತು.
Advertisement
ಎನ್‍ಸಿಆರ್ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲಾಗದು ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಮೇಲ್ನೋಟಕ್ಕೆ ಒಪ್ಪಲಾಗದು. ಇದನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.