ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

Public TV
1 Min Read
Tejasvi Surya

ಬೆಂಗಳೂರು: ವಕ್ಫ್ ನೋಟಿಸ್ ನೀಡಿದ ಕಾರಣ ಹಾವೇರಿಯ ರೈತ (Haveri Farmer) ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಹಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ (Karnataka Highcourt) ತಡೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ಗುರುವಾರ (ನ.14) ತಡೆ ನೀಡಿದೆ. ಇದನ್ನೂ ಓದಿ: ವಕ್ಫ್‌ ನೋಟಿಸ್‌ನಿಂದಲ್ಲ ಸಾಲಭಾದೆಯಿಂದ ರೈತ ರುದ್ರಪ್ಪ ಆತ್ಮಹತ್ಯೆ – ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ

Haveri Death

ಏನಿದು ಪ್ರಕರಣ?
ಪಹಣಿಯಲ್ಲಿ ವಕ್ಫ್ (Waqf) ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿ (Hubballi) ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ

Share This Article