ಬೆಂಗಳೂರು: 15ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ(Karnataka Graduate Primary Teacher Selection List) ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್(High Court) ತಡೆ ನೀಡಿದೆ.
ಮೀಸಲಾತಿ(Reservation) ಸಂಬಂಧ ಹಲವು ಅಭ್ಯರ್ಥಿಗಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಅಂತಿಮ ಆಯ್ಕೆ ಪಟ್ಟಿಗೆ ಮುಂದಿನ ವಿಚಾರಣೆವರೆಗೂ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: iPhone ತಯಾರಿಸುವ ಕೋಲಾರದ ವಿಸ್ಟ್ರಾನ್ ಖರೀದಿಗೆ ಮುಂದಾದ ಟಾಟಾ
Advertisement
Advertisement
15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನ.19 ರಂದು ಪ್ರಕಟಿಸಲಾಗಿದ್ದು, ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು. ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿದ್ದವು.
Advertisement
ಅಕ್ಷತಾ ಚೌಗುಲೆ ಸೇರಿದಂತೆ ಇತರೆ 20 ಮಂದಿ ಅಭ್ಯರ್ಥಿಗಳು ಮೀಸಲಾತಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ ಎಂದು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದರು.