ಹಾಸನ: ಮಾಜಿ ಶಾಸಕ ಪ್ರೀತಂಗೌಡಗೆ (Preetham Gowda) ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಲೋಕಾಯುಕ್ತ ಎಸ್ಪಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ – ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆ ನೀಡಿದೆ. ಎಲ್ಲಾ ಪ್ರಕ್ರಿಯೆಗಳಿಗೂ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಬಿದ್ದಿದೆ.
ಲೋಕಾಯುಕ್ತ ಎಸ್ಪಿ ಹಾಗೂ ಸಂದೀಪ.ಬಿ.ಇ. ಅವರಿಗೆ ನೋಟಿಸ್ ನೀಡುವಂತೆ ನ್ಯಾಯಮೂರ್ತಿಗಳು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಅವ್ರು IAS ಮಾಡಿದ್ರೆ ಜನ ನನ್ನನ್ನು 6 ಬಾರಿ ಶಾಸಕನನ್ನಾಗಿ ಮಾಡಿದ್ದಾರೆ: ಹಾಸನ ಡಿಸಿ ವಿರುದ್ಧ ರೇವಣ್ಣ ಕಿಡಿ
