ಬೆಂಗಳೂರು: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಿರುದ್ಧ ದಾಖಲಾದ ಎಫ್‌ಐಆರ್‌ಗೆ (FIR) ಹೈಕೋರ್ಟ್ (High Court) ತಡೆ ನೀಡಿದೆ.
ಚುನಾವಣಾ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್ ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಕಕ್ಷಿದಾರರಿಗೆ ಎಚ್ಚರಿಸಿ ಎಂದು ಡಿಕೆಶಿ ಪರ ವಕೀಲ ಉದಯ್ ಹೊಳ್ಳಗೆ ಸೂಚಿಸಿ ಪ್ರಕರಣಕ್ಕೆ ತಡೆ ನೀಡಿತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋತು ಜೀವನದಲ್ಲಿ ಗೆದ್ದವರು!
Advertisement
Advertisement
ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದರು. ಈ ವಾದಕ್ಕೆ ಆಯೋಗದ ಪರ ವಕೀಲ ಶರತ್ ದೊಡ್ಡವಾಡ್ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಸುರೇಶ್‌ಗೆ ವೋಟ್ ಹಾಕಿಲ್ಲ ಅಂದ್ರೆ ಹಕ್ಕು ಪತ್ರ ನೀಡಲ್ಲ: ಡಿಕೆಶಿಯಿಂದ ಬೆದರಿಕೆ, ಬಿಜೆಪಿ ಕಿಡಿ
Advertisement
ನಾನು ಇಲ್ಲಿ ಬಿಸಿನೆಸ್ ಡೀಲ್‌ಗೆ ಬಂದಿದ್ದೇನೆ. ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನೀವು ಅಪಾರ್ಟ್ ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ ಎಂದು ಮತದಾರರಿಗೆ ಡಿ. ಕೆ ಶಿವಕುಮಾರ್ ಆಮಿಷ ಒಡ್ಡಿದ್ದರು ಎಂದು ಶರತ್ ದೊಡ್ಡವಾಡ್ ವಾದಿಸಿದರು.
Advertisement
ಎರಡು ಕಡೆಯ ವಾದ ಆಲಿಸಿ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಮುಂದಿನ ವಿಚಾರಣೆ ನಡೆಯುವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿತು.