ಬೆಂಗಳೂರು: ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದ (MUDA Case) ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್ (High Court) ನ್ಯಾ. ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.
ಆದೇಶದಲ್ಲಿ ಏನಿದೆ?
ರಾಜ್ಯಪಾಲರ ಆದೇಶ ವಿವೇಚನಾ ಶೂನ್ಯವಾಗಿಲ್ಲ. ಎಲ್ಲವೂ ಕಾನೂನಿನ ಅನ್ವಯವಾಗಿದ್ದು ತನಿಖಾಧಿಕಾರಿಯಿಂದ ಮುಂಚಿತವಾಗಿ ತನಿಖೆ ನಡೆಸಿ ವರದಿ ಪಡೆಯೋ ಅಗತ್ಯವಿಲ್ಲ.
Advertisement
ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಖಾಸಗಿ ವ್ಯಕ್ತಿಯೂ ಸಹ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಪಡೆಯಬಹುದು.
Advertisement
ಸಂಪುಟದ ಸಲಹೆಯನ್ನೂ ರಾಜ್ಯಪಾಲರು ತಿರಸ್ಕರಿಸಬಹುದು. ಖಾಸಗಿ ದೂರುದಾರರು ರಾಜ್ಯಪಾಲರಿಂದ ಅನುಮತಿ ಪಡೆಯಬಹುದು. ಪೊಲೀಸ್ ಅಧಿಕಾರಿಯೇ ಅನುಮತಿ ಕೋರಬೇಕೆಂಬ ಅಗತ್ಯತೆ ಇಲ್ಲ. ಇದನ್ನೂ ಓದಿ: ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್
Advertisement
Advertisement
ರಾಜ್ಯಪಾಲರ ಆದೇಶದಲ್ಲಿ ಯಾವುದೇ ಲೋಪ ಕಾಣುತ್ತಿಲ್ಲ. ಕಡತಗಳಲ್ಲಿ ನಿರ್ಧಾರದ ಹಿಂದಿನ ಕಾರಣ ದಾಖಲಿಸಿದ್ರೆ ಸಾಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಅಗಾಧವಾದ ವಿವೇಚನೆಯನ್ನು ಬಳಸಿದ್ದಾರೆ.
ತನಿಖೆಗೆ ಅನುಮತಿ ನೀಡುವ ಮುನ್ನ ವಿಚಾರಣೆ ಆಲಿಸಬೇಕು ಎಂಬುದು ಕಡ್ಡಾಯವಲ್ಲ. ಫಲಾನುಭವಿಗಳು ಅರ್ಜಿದಾರರ ಕುಟುಂಬದವರೇ ಆಗಿದ್ದಾರೆ. ಸಿಎಂ ಕುಟುಂಬದವರೇ ಫಲಾನುಭವಿ (ಪತ್ನಿ) ಆಗಿರುವುದರಿಂದ ತನಿಖೆ ಅಗತ್ಯವಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ಮುಡಾದಲ್ಲಿ ಪ್ರಭಾವ ಬಳಸಿ ಭಾರೀ ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್ ಅವರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಆಗಸ್ಟ್ 17 ರಂದು ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನೂ ಓದಿ: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ಖಾಸಗಿ ದೂರುದಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಬಹುದು. ರಾಜ್ಯಪಾಲರು ದೂರಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಧ್ಯಯನ ಮಾಡಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಸಮರ್ಪಕವಾಗಿದೆ ಎಂದು ಗೆಹ್ಲೋಟ್ ನಿರ್ಧಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.