ಶಿವಮೊಗ್ಗ: ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಶಾಕು ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಭಗವಾನ್ ಧ್ವಜ ಹಾರಿಸಿದ್ದಾರೆ.
Advertisement
ಶಿವಮೊಗ್ಗದ ಬಹುತೇಕ ಕಾಲೇಜುಗಳಲ್ಲಿ ಹಿಜಬ್, ಕೇಸರಿ ಶಾಲು ವಿವಾದ ಭುಗಿಲೆದಿದೆ. ಸಹ್ಯಾದ್ರಿ ಕಾಲೇಜ್, ಸರಕಾರಿ ಪದವಿ ಕಾಲೇಜ್ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದಾರೆ.
Advertisement
Advertisement
ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಮದು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಎಸ್‍ಪಿ ಲಕ್ಷ್ಮಿ ಪ್ರಸಾದ್ ದೌಡಾಯಿಸಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!
Advertisement
ಒಟ್ಟನಲ್ಲಿ ಹೈಕೋರ್ಟ್ ವಿಚಾರಣೆ ನಡುವೆಯೇ ರಾಜ್ಯಾದ್ಯಂತ ಹಿಜಬ್- ಕೇಸರಿ ಶಾಲು ಸಂಘರ್ಷ ವಿಕೋಪಕ್ಕೆ ತಿರುಗುತ್ತಿದೆ. ರಾಜ್ಯದ ಹಲವಡೆ ಕಲ್ಲುತೂರಾಟ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಆಯಾ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು