ಉಡುಪಿ: ರಾಜ್ಯದಲ್ಲಿ ಹಿಜಬ್- ಕೇಸರಿ ಫೈಟ್ ಜೋರಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ತಮ್ಮ ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇಂದು ನಗರದ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ.
Advertisement
ಬುರ್ಖಾ, ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದೆ. ಕೇಸರಿ ಪೇಟ ತೊಟ್ಟ ಹಿಂದೂ ವಿದ್ಯಾರ್ಥಿಗಳು ಆವರಣದ ಹೊರಕ್ಕೆ ಇದ್ದು, ಬೀಗ ತೆಗೆಯಲು ಕಾಯುತ್ತಿದ್ದಾರೆ. ಇದನ್ನೂ ಓದಿ: ಧರ್ಮವನ್ನು ಮನೆಗಳಲ್ಲಿ ಆಚರಿಸಿ, ಶಿಕ್ಷಣಕ್ಕೆ ತರಬೇಡಿ: ಸುರಯ್ಯ ಅಂಜುಮ್
Advertisement
Advertisement
ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧಾರ್ಮಿಕ ಹಕ್ಕು ಎರಡು ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದು ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ. ಹೀಗಾಗಿ ಇಡೀ ರಾಜ್ಯದ ಚಿತ್ತ ಹೈಕೋರ್ಟ್‍ನತ್ತ ನೆಟ್ಟಿದೆ. ಇದನ್ನೂ ಓದಿ: ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು
Advertisement
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್‍ಗೆ ನಿರ್ಬಂಧ ಹೇರಿದ್ದನ್ನ ವಿರೋಧಿಸಿ, ಕೆಲ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇವತ್ತು ಹೈಕೋರ್ಟ್ ಕಟಕಟೆಗೆ ಈ ಪ್ರಕರಣ ಬರಲಿದೆ. ಸುಪ್ರೀಂಕೋರ್ಟ್, ಕೇರಳ, ಮದ್ರಾಸ್ ಹೈಕೋರ್ಟ್‍ಗಳು ಇಂಥದ್ದೇ ಪ್ರಕರಣಗಳಲ್ಲಿ ವಸ್ತ್ರ ಸಂಹಿತೆಯನ್ನ ಎತ್ತಿ ಹಿಡಿದಿವೆ. ಹೀಗಾಗಿ ಉಡುಪಿ ಪ್ರಕರಣದಲ್ಲಿ ಹೈಕೋರ್ಟ್ ಯಾವ ಆದೇಶ ನೀಡಲಿದೆ ಅನ್ನೋದು ಎಲ್ಲರ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಹಿಜಬ್‍ಗೆ ಅನುಮತಿ ನೀಡಿ – ಈಗ ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ