ನವದೆಹಲಿ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಬಿಜೆಪಿ ಟ್ವೀಟ್ ಮೂಲಕ ಬಹಿರಂಗಪಡಿಸುತ್ತಿದೆ ಎಂದು ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನಾಚಿಕೆಯಿಲ್ಲದ ಕರ್ನಾಟಕ ಬಿಜೆಪಿ ಘಟಕವು ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವುದಕ್ಕಾಗಿ ಅಪ್ರಾಪ್ತ ಬಾಲಕಿಯರ ವಿಳಾಸಗಳನ್ನು ಟ್ವೀಟ್ ಮಾಡುತ್ತಿದೆ. ಇದು ಎಷ್ಟು ಸಂವೇದನಾಹೀನ ನಡೆ ಎಂಬುದು ನಿಮಗೆ ತಿಳಿದಿದೆಯೇ ಎಂದು ಪ್ರಿಯಾಂಕಾ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ಹೈಡ್ರಾಮಾ ನೋಡಿ ಕೇಸರಿ ಶಾಲು ತೆಗೆದ ವಿದ್ಯಾರ್ಥಿ
ಕರ್ನಾಟಕದ ಡಿಜಿಪಿ ಮತ್ತು ಭಾರತದ ಟ್ವಿಟ್ಟರ್ ಶಾಖೆ, ಬಿಜೆಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ಬಿಜೆಪಿ ಘಟಕವು ಹಿಜಬ್ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರ ಹೆಸರು ಮತ್ತು ಅವರ ವೈಯಕ್ತಿಕ ವಿವರಗಳನ್ನು ಟ್ವೀಟ್ ಮಾಡಿತ್ತು. ರಾಜಕೀಯದಲ್ಲಿ ಪ್ರಸ್ತುತವಾಗಿರಲು ಕಾಂಗ್ರೆಸ್ ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನೂ ಓದಿ: ಹಿಜಬ್ ವಿವಾದದ ನಡುವೆಯೇ ಮಾದರಿಯಾದ ಮುಸ್ಲಿಂ ಶಿಕ್ಷಣ ಸಂಸ್ಥೆ