Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?

Bengaluru City

ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?

Public TV
Last updated: February 8, 2022 9:33 pm
Public TV
Share
3 Min Read
karnataka high court
SHARE

ಬೆಂಗಳೂರು: “ಅನುಚಿತ ಗುಂಪಷ್ಟೇ ವಿವಾದವನ್ನು ಜೀವಂತವಾಗಿಡಬಲ್ಲದು ಮತ್ತು ಸಂವಿಧಾನದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮನವಿ” ಇದು ಜನತೆಯಲ್ಲಿ ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಮೂರ್ತಿ ಎಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಮಾಡಿರುವ ಮನವಿ.

ಕಾಲೇಜಿಗೆ ಹಿಜಬ್(Hijab) ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಪೀಠ ಮುಂದೂಡಿದೆ. ಇವತ್ತು ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ಅವರಷ್ಟೇ ವಾದ ಮಂಡನೆ ಮಾಡಿದರು. ಮಧ್ಯಾ ಹ್ನ 1 ಗಂಟೆಗೆ ಶುರುವಾದ ವಿಚಾರಣೆ ಸಂಜೆ 4:30ರವರೆಗೂ ನಡೆಯಿತು.

HIJAB BAGALKOTE 2

ವಾದ-ಪ್ರತಿವಾದದ ಆಲಿಸಿದ ಬಳಿಕ ಇವತ್ತೇ ತೀರ್ಪು ಹೊರಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿ ಜೆಎನ್ ದೀಕ್ಷಿತ್ ನೇತೃತ್ವದ ಪೀಠ ಮುಂದೂಡಿದೆ. ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನ್ಯಾಯಮೂರ್ತಿಗಳು ತೀವ್ರ ಕಳವಳ ವ್ಯಕ್ತಪಡಿಸಿದರು. ಆದಷ್ಟು ಬೇಗ ತೀರ್ಪು ನೀಡುವುದಾಗಿ ತಿಳಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ಒಂದು ಕಡೆ ಹಿಜಬ್ ಕಿಡಿ ಇನ್ನೊಂದೆಡೆ ಕೇಸರಿ, ನೀಲಿ ಶಾಲು ಸಂಘರ್ಷ!

ಅರ್ಜಿದಾರರ ಪರ ವಕೀಲರ ವಾದ:
ಕುರಾನ್ ಪ್ರಕಾರ ಹಿಜಬ್ ಧರಿಸುವುದು ಮೂಲಭೂತ ಆಚರಣೆ. ಶೈಕ್ಷಣಿಕ ವರ್ಷ ಮುಗಿಯಲು 2 ತಿಂಗಳಷ್ಟೇ ಇದೆ. ಹಿಜಬ್ ಧರಿಸಿ ಹೋಗಲು ಅವಕಾಶ ಕೊಡಿ. ಪರೀಕ್ಷೆ ಮುಗಿಯುವವರೆಗೂ ಯೂನಿಫಾರಂ ಬಣ್ಣದ ಹಿಜಬ್ ಧರಿಸಲು ಅವಕಾಶ ಕೊಡಿ. ಆ ಬಳಿಕ ಬೇಕಾದರೆ ಈ ವಿಷಯದ ಬಗ್ಗೆ ಕೋರ್ಟ್ ನಿರ್ಧರಿಸಬಹುದು.

ಹಿಜಬ್ ಧರಿಸುವುದು ಮೂಲಭೂತ ಹಕ್ಕಲ್ಲ ಎಂಬ ಅರ್ಥದಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಸುತ್ತೋಲೆ ಕೇರಳ, ಮದ್ರಾಸ್, ಬಾಂಬೆ ಹೈಕೋರ್ಟ್ ತೀರ್ಪನ್ನು ಪಾಲಿಸಿಲ್ಲ. ಉಡುಪು ಧರಿಸುವುದು ಸುಪ್ರೀಂಕೋರ್ಟ್ ನೀಡಿರುವ ಖಾಸಗಿತನವೂ ಮೂಲಭೂತ ಹಕ್ಕು ವ್ಯಾಪ್ತಿಯಲ್ಲಿ ಬರುತ್ತದೆ.

SHIVAMOGGA COLLEGE KEASRI HIJAB 2

ಜ್ಯಾತ್ಯಾತೀತತೆ ಚಿಂತನೆಯಡಿ ಧಾರ್ಮಿಕ ಆಚರಣೆಗಳನ್ನು ಪರೀಕ್ಷೆಗೊಳಪಡಿಸಲು ಸಾಧ್ಯವಿಲ್ಲ. ಧರ್ಮದ ಮೂಲಭೂತ ಆಚರಣೆಯನ್ನು ಧಾರ್ಮಿಕತೆಯ ನಂಬಿಕೆ ಮೇಲಷ್ಟೇ ನಿರ್ಧರಿಸಬೇಕು, ಜ್ಯಾತ್ಯಾತೀತ ಭಾವನೆಗಳ ಆಧಾರದಲ್ಲಿ ಅಲ್ಲ. ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿನ ಮೂಲಭೂತ ಹಕ್ಕಿಗೂ ಸರ್ಕಾರಿ ಸಂಸ್ಥೆಯಲ್ಲಿ ಆಚರಿಸಲಾಗುವ ಮೂಲಭೂತ ಹಕ್ಕಿಗೂ ವ್ಯತ್ಯಾಸ ಇದೆ. ಇದನ್ನೂ ಓದಿ: ತಾರಕಕ್ಕೇರಿದ ಹಿಜಬ್ ವಿವಾದ – ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಹಿಜಬ್ ಧರ್ಮದ ಅವಿಭಾಜ್ಯ ಭಾಗವೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕಾಲೇಜು ಪ್ರವೇಶಾತಿಯ ಆರಂಭದಿಂದಲೂ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಬ್ ಧರಿಸುವುದು ಕೆಲವುಗಳ ಉಲ್ಲಂಘನೆ ಎಂದು ಕೆಲವರು ಭಾವಿಸುವವರೆಗೂ ಏನೂ ತೊಂದರೆ ಆಗಿರಲಿಲ್ಲ. ಪ್ರತಿಯೊಂದು ಧಾರ್ಮಿಕ ಆಚರಣೆಗೂ ಸರ್ಕಾರ ಸಾರ್ವಜನಿಕ ಸುವ್ಯವಸ್ಥೆಯ ಬಣ್ಣ ನೀಡಲು ಹೊರಟರೆ ಏನಾಗಬಹುದು? ಬ್ರಾಹ್ಮಣರು  ನಾಮ ಧರಿಸಿ ಅಥವಾ ಸಿಖ್ಖರು ಟರ್ಬನ್ ಧರಿಸಿ ಶಾಲೆಗೆ ಹೋದರೆ ಅದು ಸಾರ್ವಜನಿಕ ಸುವ್ಯವಸ್ಥೆಗೆ ಪರಿಣಾಮ ಬೀಳುತ್ತದೆ ಎಂದು ಸರ್ಕಾರ ಹೇಳಲಾದಿತೇ?

ಹಿಜಬ್ ಧರಿಸಿ ಹೊರಗಡೆ ಓಡಾಡಿದ್ರೆ ಸಾರ್ವಜನಿಕ ಸುವ್ಯವಸ್ಥೆ ವಿಷಯವಲ್ಲ, ಮಾರ್ಕೆಟ್‍ಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆಯ ವಿಷಯವಲ್ಲ. ಆದರೆ ಹಿಜಬ್ ಧರಿಸಿ ಕಾಲೇಜಿಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆ ಹೇಗಾತ್ತದೆ? ಜನರು ತಮ್ಮ ಮೂಲಭೂತ ಹಕ್ಕು ಚಲಾಯಿಸಲು ಸರ್ಕಾರ ವ್ಯವಸ್ಥೆ ಮಾಡಬೇಕು. ಶಾಲೆಗೆ ಹೋಗುವ ವಿದ್ಯಾರ್ಥಿಗಳ ಹಕ್ಕನ್ನು ಸರ್ಕಾರ ರಕ್ಷಣೆ ಮಾಡಬೇಕು.

SMG HIJAB PROTEST

ಶಾಲೆಗಳಲ್ಲಿ ಯಾರೋ ನಾಮ ಧರಿಸಿ ಬಂದರೆ, ಹಿಜಬ್ ಧರಿಸಿ ಬಂದರೆ, ಕ್ರಾಸ್ ಧರಿಸಿ ಬಂದರೆ ಅದು ಸಕಾರಾತ್ಮಕ ಜ್ಯಾತ್ಯಾತೀತತೆ. ನಾಲ್ಕೈದು ದಿನಗಳಿಂದ ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜುಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದೆ. ಹಿಜಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ್ದು `ಧಾರ್ಮಿಕ ಅಸ್ಪ್ರಶ್ಯತೆ’. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಕಾನೂನು ಮಾಡಬಹುದು, ಬಾರ್ ಕೌನ್ಸಿಲ್ ರೀತಿಯಲ್ಲೇ. ಆದರೆ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಬಹುದೇ ಎಂಬುದೇ ಪ್ರಶ್ನೆ.

ಜಡ್ಜ್‌ ಹೇಳಿದ್ದೇನು?
ಸಂವಿಧಾನ ಏನು ಹೇಳಿದೆಯೋ ಅದರಂತೆಯೇ ತೀರ್ಮಾನ. ಸಂವಿಧಾನವೇ ನನಗೆ ಭಗವದ್ಗೀತೆ. ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ, ಭಾವನೆಗಳನ್ನು ಪಕ್ಕಕ್ಕಿಡಿ. ಎರಡು ತಿಂಗಳ ಬಳಿಕ ನಿಯಮ (ಯೂನಿಫಾರಂ ನಿಯಮ) ಮಾಡಿದರೆ ಪಾಲಿಸುತ್ತೀರಾ?

ಪ್ರತಿ ದಿನ ವಿದ್ಯಾರ್ಥಿಗಳು ಬೀದಿಯಲ್ಲಿ ಹೋರಾಟ ಮಾಡುವುದನ್ನು ನೋಡಲಾಗದು. ಇದು ಒಳ್ಳೆಯ ದೃಶ್ಯ ಅಲ್ಲ. ನಮ್ಮನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸುತ್ತಿದೆ. ವಾಟ್ಸಾಪ್ ಓಪನ್ ಮಾಡಿದಾಗಲೆಲ್ಲ ಹಲವು ಮೆಸೇಜ್‍ಗಳು ಬರುತ್ತಿವೆ. ಕೋರ್ಟ್ ಆ ಆದೇಶ ಹೊರಡಿಸಿದೆ ಈ ಆದೇಶ ಹೊರಡಿಸಿದೆ ಎಂದು ಅಸಂಖ್ಯಾತ ಸಂಖ್ಯೆಗಳಿಂದ ಮೆಸೇಜ್ ಬರುತ್ತಿದೆ.

`ಹಿಜಬ್’ ಇಸ್ಲಾಂ ಅವಿಭಾಜ್ಯ ಅಂಗವೇ ಎಂಬ ಬಗ್ಗೆಯಷ್ಟೇ ವಿಚಾರಣೆ ಮಾಡುತ್ತೇವೆ. ಉಡುಪು ಧರಿಸುವುದು ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ನಾನು ವಿದ್ಯಾರ್ಥಿಯಾದ ದಿನದಿಂದ ಇಂಥಾ ಸಂಘರ್ಷವನ್ನು ನೋಡಿರಲಿಲ್ಲ. ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು. ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು.. ಜನರು ಸುವ್ಯವಸ್ಥೆ ಪಾಲಿಸಬೇಕು. ಕೋರ್ಟ್‍ಗೆ ನಂಬಿಕೆ ಇದೆ.

TAGGED:Bhagvad GitaConstitutionhigh courtkarnatakaಉಡುಪಿಕೇಸರಿಸಂವಿಧಾನಹಿಜಬ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
9 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
57 minutes ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
3 hours ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?