ಬೆಂಗಳೂರು: ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕ ಆದೇಶ ಪ್ರಕಟಿಸಿದೆ.
ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ
Advertisement
Advertisement
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Advertisement
ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ
Advertisement
ಮುಂದಿನ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಯಾರೂ ಸಹ ಧಾರ್ಮಿಕ ಬಟ್ಟೆ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಸಾಂವಿಧಾನಾತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಅಷ್ಟೇ ಅಲ್ಲದೇ ಪ್ರತಿನಿತ್ಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.