ಬೆಂಗಳೂರು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ. ಶಾಲೆಗಳಿಗೆ ಭದ್ರತೆ ಒದಗಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯಲಿದೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
Advertisement
Advertisement
ನಿಯಮ ಏನು?
ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಹಿಜಬ್, ಕೇಸರಿ ಶಾಲು, ನೀಲಿ ಶಾಲು, ಧಾರ್ಮಿಕ ಉಡುಗೆಗಳಿಗೆ ಅವಕಾಶ ಇಲ್ಲ. ಸರ್ಕಾರಿ ಆದೇಶ ಪಾಲಿಸದಿದ್ದರೆ ಶಾಲೆಗೆ ಪ್ರವೇಶ ಇಲ್ಲ. ಶಾಲಾ ಆವರಣದಲ್ಲಿ ಪ್ರತಿಭಟನೆ ನಿಷೇಧಿಸಲಾಗಿದ್ದು, ಸಮವಸ್ತ್ರ ಧರಿಸದಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲು ಅವಕಾಶ ಇಲ್ಲ. ಇದನ್ನೂ ಓದಿ: ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ದೇಶದ ಪ್ರಧಾನಿಯಾಗುತ್ತಾರೆ: ಓವೈಸಿ
Advertisement
ಪೊಲೀಸರ ನಿಗಾ:
ಸೂಕ್ಷ್ಮ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ನಿಷೇಧಾಜ್ಞೆ ಜಾರಿಗೆ ಎಸ್‍ಪಿಗಳಿಗೆ ಅಧಿಕಾರ ನೀಡಲಾಗಿದೆ. ಗಲಾಟೆ ನಡೆದ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜಿಸಿದ್ದು, ಪರಿಸ್ಥಿತಿ ಕೈ ಮಿರಿದರೆ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಡಿಸಿ, ಎಸ್‍ಪಿಗಳಿಗೆ ನೀಡಲಾಗಿದೆ.
Advertisement
ಸರ್ಕಾರದ ಆದೇಶ ಪಾಲಿಸಿದ್ದರೆ ದೂರು ದಾಖಲಾಗುತ್ತದೆ. ರಾಷ್ಟ್ರ ಬಾವುಟ ಹಾರಾಡುವ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗಿದ್ದು, ಶಾಲೆಗಳ ಆವರಣದಲ್ಲಿ ಪ್ರತಿಭಟನೆ, ಧರಣಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಬುರ್ಖಾ ಪದ್ಧತಿ ಇಲ್ಲದೆ ಇರೋದಕ್ಕೇ ದೇಶದಲ್ಲಿ ರೇಪ್ ಹೆಚ್ಚಾಗ್ತಿದೆ: ಜಮೀರ್ ವ್ಯಾಖ್ಯಾನ
ಯಾವುದೇ ಸಂಘಟನೆಗಳಿಗೆ ಶಾಲೆಯ ಆವರಣಕ್ಕೆ ಪ್ರವೇಶ ಇಲ್ಲ. ಪೋಷಕರು ಹೊರತುಪಡಿಸಿ ಇನ್ಯಾರು ಶಾಲೆ ಆವರಣಕ್ಕೆ ಬರುವಂತೆ ಇಲ್ಲ. ಶಾಲಾ-ಕಾಲೇಜುಗಳ ಸುತ್ತ ಅನುಮಾನಾಸ್ಪದ ವ್ಯಕ್ತಿಗಳು ಕಂಡರೆ ಕೂಡಲೇ ಕ್ರಮ ಜರುಗಿಸಲಾಗುತ್ತದೆ. ಅನುಮಾನಾಸ್ಪದ ಸಂಘಟನೆಗಳ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.