ನವದೆಹಲಿ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಸಲ್ಲಿಸಿದ ಅರ್ಜಿಗಳ ತುರ್ತು ವಿಚಾರಣೆ ಸಾಧ್ಯವಿಲ್ಲ, ಹೋಳಿ ರಜೆ ಬಳಿಕ ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಹೇಳಿದ್ದಾರೆ.
Advertisement
ಇಂದು ಕಲಾಪ ಆರಂಭಕ್ಕೂ ಮುನ್ನ ಹಿರಿಯ ವಕೀಲ ಸಂಜಯ್ ಹೆಗಡೆ ಹಿಜಬ್ ವಿವಾದ ಮೇಲ್ಮನವಿ ಅರ್ಜಿಗಳ ಸಲ್ಲಿಕೆಯ ಬಗ್ಗೆ ಪ್ರಸ್ತಾಪಿಸಿದರು. ಪರೀಕ್ಷೆಗಳು ಹತ್ತಿರವಾಗುತ್ತಿವೆ, ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗಬೇಕಿದೆ ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಿಜಬ್ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್ ಶಂಕೆ
Advertisement
Advertisement
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾ.ಎನ್.ವಿ ರಮಣ, ತುರ್ತು ವಿಚಾರಣೆ ಸಾಧ್ಯವಿಲ್ಲ. ಸೂಕ್ತ ಸಮಯದಲ್ಲಿ ನಾವು ವಿಚಾರಣೆ ನಡೆಸಲಿದ್ದೇವೆ. ಹೋಳಿ ರಜೆಯ ಬಳಿಕ ವಿಚಾರಣೆಗೆ ವಿಷಯ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ವಕೀಲ ಸಂಜಯ್ ಹೆಗಡೆ, ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ ಅದಕ್ಕೂ ನ್ಯಾಯಪೀಠ ಸಮ್ಮತಿ ಸೂಚಿಸಲಿಲ್ಲ. ಇದನ್ನೂ ಓದಿ: ಹಿಜಬ್ ಬಗ್ಗೆ ಎದ್ದಿದ್ದ 3 ಪ್ರಶ್ನೆಗಳಿಗೆ ಸಿಕ್ತು ಉತ್ತರ: ಅರ್ಜಿದಾರರು, ಸರ್ಕಾರ, ಹೈಕೋರ್ಟ್ ಹೇಳಿದ್ದೇನು?
Advertisement
Hijab ban matter mentioned before the Supreme Court for urgent hearing by senior advocate Sanjay Hegde. Supreme Court says it would consider the listing of pleas related to hearing, after Holi vacations. pic.twitter.com/xNNl2auTYh
— ANI (@ANI) March 16, 2022
ಈ ಮಧ್ಯೆ ಹಿರಿಯ ವಕೀಲ, ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ, ದೇಶದ ಎಲ್ಲ ನೋಂದಾಯಿತ ಮತ್ತು ಮಾನ್ಯತೆ ಪಡೆದ ಶಾಲೆಗಳು ಮತ್ತು ಕಾಲೇಜುಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ವಸ್ತ್ರ ನೀತಿಯನ್ನು ಪಾಲಿಸಲು ಸೂಚಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಪ್ರಕರಣ ತುರ್ತು ವಿಚಾರಣೆಯ ಅವಶ್ಯಕತೆ ಏನಿದೆ ಎಂದು ಗರಂ ಆದರು. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿವೆ. ಮುಖ್ಯವಾಗಿ ಉಡುಪಿ ಮೂಲದ ವಿದ್ಯಾರ್ಥಿನಿಯರಾದ ಐಶತ್ ಶಿಫಾ ಮತ್ತು ನಿಬಾ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಐಶತ್ ಶಿಫಾ ಪರ ಹಿರಿಯ ದೇವದತ್ ಕಾಮತ್, ನಿಬಾ ಪರ ಹಿರಿಯ ವಕೀಲ ಸಂಜಯ್ ಹೆಗಡೆ ಇಂದು ವಾದ ಮಂಡಿಸಿದರು. ಪ್ರಕರಣ ಸೋಮವಾರದ ಬಳಿಕ ವಿಚಾರಣೆ ಬರುವ ಸಾಧ್ಯತೆಗಳಿದೆ.