ಬೆಂಗಳೂರು: ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ವಿದ್ಯುತ್ ದರ ದುಬಾರಿಯಾಗುವ ಸಾಧ್ಯತೆಯಿದೆ.
Advertisement
ಪ್ರತಿ ಯೂನಿಟ್‍ಗೆ 30 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದೆ. ವಿದ್ಯುತ್ ದರ ಏರಿಕೆ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ನಾಳೆ ಗ್ರಾಹಕರ ಅಹವಾಲು ಸ್ವೀಕರಿಸಲಿದೆ. ನಾಳೆಯಿಂದ 3 ದಿನ ಎಲ್ಲ ಎಸ್ಕಾಂಗಳ ದರ ಪರಿಷ್ಕರಣೆ ಪರಿಶೀಲನಾ ಕಾರ್ಯ ನಡೆಯಲಿದೆ.
Advertisement
Advertisement
ಬೆಸ್ಕಾಂ ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾಪ ಮಾಡಿದ್ದಕ್ಕೆ, ಕೆಇಆರ್‍ಸಿ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾಪ ಇಟ್ಟಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಬಗ್ಗೆ ಸ್ಪಷ್ಟ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.
Advertisement