ಮಂಗಳೂರು: ಹಾಲಿನ ಬೆಲೆ (Milk Price) ಜಾಸ್ತಿ ಮಾಡಬೇಕೆಂದು ರೈತರ (Farmers) ಒತ್ತಡವಿತ್ತು. ರೈತರ ಒತ್ತಡದ ಮೇಲೆ ಬೆಲೆ ಏರಿಕೆ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya Temple) ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೀರಿನ ಬೆಲೆಯೂ ಲೀಟರ್‌ಗೆ 25 ರೂ.ಆಗಿದೆ ಎಂದು ಹೇಳುವ ಮೂಲಕ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡರು.
ಪ್ರಜ್ವಲ್ ರೇವಣ್ಣ (Prajwal Revanna) ವೀಡಿಯೋ ವೈರಲ್ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ (Preetham J. Gowda) ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಮಂಗಳೂರಿನಿಂದ ಸುಬ್ರಹ್ಮಣ್ಯದವರೆಗೆ ಮಲಗಿಕೊಂಡೇ ಬಂದಿದ್ದೇನೆ. ನನಗೆ ಯಾರೂ ಈ ವಿಚಾರ ತಿಳಿಸಿಲ್ಲ. ನನಗೆ ಏನೂ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು ನ್ಯಾಯಾಲಯಕ್ಕೆ ಹಾಜರ್ – ಉದಯನಿಧಿ ಸ್ಟಾಲಿನ್‍ಗೆ ಬಿಗ್ ರಿಲೀಫ್
ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದ್ದೇನೆ. ರಾಜ್ಯಕ್ಕೆ ಮತ್ತು ಜನರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ರಾಜ್ಯದಲ್ಲಿ ಮಳೆ ಈಗಷ್ಟೇ ಪ್ರಾರಂಭವಾಗಿದ್ದು ಡ್ಯಾಂಗಳಲ್ಲಿ ಜಾಸ್ತಿ ನೀರು ಬರುತ್ತಿದೆ. ಆದರೂ ತಮಿಳುನಾಡಿನವರು ಈಗಲೇ ನೀರು ಬಿಡುವಂತೆ ಬೇಡಿಕೆ ಇಟ್ಟಿದ್ದಾರೆ. ಡ್ಯಾಂಗಳಲ್ಲಿ ಇನ್ನೂ ನೀರು ಬರಲು ಪ್ರಾರಂಭವಾಗಿಲ್ಲ. ಹಾಗಾಗಿ ಮಳೆ ಹೆಚ್ಚಾಗಿ ಬರಲಿ ಎಂದು ಪ್ರಾರ್ಥನೆ ಮಾಡೋಣ ಎಂದರು.