ಬೆಂಗಳೂರು: ಆರೂವರೆ ವರ್ಷ ಕಾಂಗ್ರೆಸ್‍ಅವರು ಅಧಿಕಾರದಲಿದ್ದಾಗ ಏನೂ ಮಾಡಲಿಲ್ಲ. ಈಗ ನೀರಿಗೋಸ್ಕರ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ
ಮೇಕೆದಾಟು ಯೋಜನೆ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ. ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ರಾಜಕಾರಣಿಗಳು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಬೇಕು. ಆರೂವರೆ ವರ್ಷ ಅವರು ಅಧಿಕಾರದಲಿದ್ದು ಏನು ಮಾಡಲಿಲ್ಲ. ಈಗ ನೀರಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್
ಸಾಮಾನ್ಯವಾಗಿದ್ದ ಸ್ಥಿತಿಯಲ್ಲಿ ಅವರು ಹೋರಾಟ ಮಾಡುವುದಕ್ಕೆ ಪ್ರಜಾತಂತ್ರದ ರೀತಿ ಕೆಲಸ ಮಾಡುವುದಕ್ಕೆ ಅವರಿಗೆ ಎಲ್ಲ ರೀತಿಯ ಹಕ್ಕು ಇದೆ. ಅವನ್ನು ನಾನು ವಿರೋಧಿಸುವುದಿಲ್ಲ. ಆದರೆ ಲಕ್ನೋದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರ್‍ಯಾಲಿಯನ್ನು ರದ್ದುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಜಾಥಾ ಮಾಡುತ್ತೇವೆ ಎಂದರೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದರೆ, ಅವರ ಮೇಲೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಾಗುತ್ತದೆ. ಈ ರಾಜಕೀಯವನ್ನು ಜನ ನೋಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು