ಬೆಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಹೋಟೆಲ್‍ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ.
Advertisement
ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10% ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಈ ಸಂಬಂಧ ಕೆಳದಿನಗಳ ಹಿಂದೆ ಹೋಟೆಲ್ ಮಾಲೀಕರ ಸಂಘದ ಸಭೆ ನಡೆದಿತ್ತು. ಇದೀಗ ನಾಳೆಯಿಂದ ಹೊಟೇಲ್ ಗಳಲ್ಲಿ ಹಂತ ಹಂತವಾಗಿ ದರ ಏರಿಕೆ ಮಾಡಲು ಹೋಟೆಲ್ ಅಸೋಸಿಯೇಷನ್ ತೀರ್ಮಾನಿಸಿದೆ. ಇದನ್ನೂ ಓದಿ: ತೈಲ ಬೆಲೆ ಇಳಿಕೆ ಬೆನ್ನಲ್ಲೇ ದುಬಾರಿಯಾಗಲಿದೆ ಹೋಟೆಲ್ ಫುಡ್
Advertisement
Advertisement
ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿತಗೊಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿ ಗ್ರಾಹಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಗ್ಯಾಸ್ ದರ ಮತ್ತು ಅಡುಗೆ ಎಣ್ಣೆ ದರಗಳನ್ನು ಕಡಿಮೆ ಮಾಡದ ಹಿನ್ನೆಲೆ ಹೋಟೆಲ್‍ಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಹಾಗಾಗಿ ಹೋಟೆಲ್ ಆಹಾರಗಳ ದರ ಹೆಚ್ಚಾಗಿದೆ. ಇದನ್ನೂ ಓದಿ: ಆರ್ಯನ್ ಖಾನ್ ಕಿಡ್ನಾಪ್ ಮಾಡಲಾಗಿತ್ತು: ನವಾಬ್ ಮಲಿಕ್
Advertisement
ಎಷ್ಟೆಷ್ಟು ರೇಟ್ ಆಗಬಹುದು..!?
ದೋಸೆ- 5 ರೂ ಏರಿಕೆ
ರೈಸ್ ಬಾತ್ – 5 ರೂ ಏರಿಕೆ
ಊಟ- 6-8 ರೂ ಏರಿಕೆ
ನಾರ್ಥ್ ಇಂಡಿಯನ್ ಊಟ- 10 ರೂ.ಏರಿಕೆ
ಕಾಫಿ, ಟೀ- 5 ರೂ ಏರಿಕೆ
ರೈಸ್ ಬಾತ್-4-5 ರೂ ಏರಿಕೆ
ಪ್ರತಿ ತಿಂಡಿಯ ಮೇಲೆ 5-10 ರೂ ದರ ಏರಿಕೆ ಸಾಧ್ಯತೆ