ಚಿಕ್ಕಬಳ್ಳಾಪುರ: ಐದಾರು ವಾರಗಳಗಳಲ್ಲಿ ಈ ಅಲೆ ಕೊನೆಯಾಗಲಿದೆ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಶಾಲೆಗಳಲ್ಲಿ ಮಕ್ಕಳು ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು. ಮಕ್ಕಳ ಜೀವದ ಹಿತ ದೃಷ್ಟಿಯಿಂದ ಬೆಂಗಳೂರಲ್ಲಿ ಶಾಲೆಗಳಿಗೆ ರಜೆ ಕೊಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಜೂನಿಯರ್ ಕಾಲೇಜು ಆವರಣದಲ್ಲಿ ಯುವ ಲಸಿಕಾ ಮೇಳಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 15 ರಿಂದ 18 ವರ್ಷದ ಮಕ್ಕಳಿಗೆ ಕಳೆದ ಎರಡು ದಿನಗಳಿಂದ ವ್ಯಾಕ್ಸಿನೇಷನ್ ಕೊಡುತ್ತಿದ್ದೇವೆ. ಕೋವಿಡ್‍ನಿಂದ ಶಿಕ್ಷಣ ಕ್ಷೇತ್ರದಲ್ಲಿ ನಾವು ಒಂದು ಹೆಜ್ಜೆ ಹಿಂದೆ ಹೋಗಿದ್ದೇವೆ. ಮೂರನೇ ಅಲೆ ಆದಷ್ಟೂ ಶೀಘ್ರ ಕೊನೆಗೊಳ್ಳಲಿದೆ. ಲಸಿಕೆ ಪಡೆಯುವದರ ಜೊತೆಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಹ್ಯಾಂಡ್ ಸ್ಯಾನಿಟೈಸೇಷನ್ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ: ಸುಧಾಕರ್
ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ಬೆಂಗಳೂರಿಗೆ ವಿಶೇಷ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಲಾಗಿದೆ. ಸರ್ಕಾರದ ನಿರ್ಧಾರಗಳಿಗೆ ಜನ ಸಾಮಾನ್ಯರು ಸಹಕಾರ ಕೊಡುವಂತೆ ಸಚಿವ ಸುಧಾಕರ್ ಮನವಿ ಮಾಡಿದರು. ಇದಾದ ನಂತರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಫಲಾನುಭವಿಗಳಿಗೆ ಪರಿಹಾರದ ಚೆಕ್ ವಿತರಣೆ ಮಾಡಿದರು. ಇದನ್ನೂ ಓದಿ: ಕೋವಿಡ್-19 ಮುಂದಿನ ಎರಡು ವಾರ ನಿರ್ಣಾಯಕ – ಭಾರತಕ್ಕೆ WHO ತಜ್ಞರ ಎಚ್ಚರಿಕೆ
ವಿಕೇಂಡ್ ಕರ್ಫ್ಯೂ ಜಾರಿ ಮಾಡಿರುವ ಸರ್ಕಾರದ ನಿರ್ಧಾರದಿಂದ ಬಡವರು, ಬೀದಿ ಬದಿ ವ್ಯಾಪಾರಿಗಳನ್ನು ಕೊಲೆ ಮಾಡಲು ಸರ್ಕಾರ ಹೊರಟಿದೆ ಎಂದ ಡಿಕೆಶಿವಕುಮಾರ್ ಹೇಳಿಕೆ ಸಂಬಂಧ ಮಾತನಾಡಿ, ಡಿಕೆ ಶಿವಕುಮಾರ್ ಹೇಳಿಕೆ ದುರದೃಷ್ಟಕರ. ಅವರಿಗೆ ಕೋವಿಡ್ ಬಗ್ಗೆ ಏನೂ ವಿಷಯ ಗೊತ್ತಿಲ್ಲ ಅಂತ ಅಂದುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಮಿಕ್ಸಿಂಗ್ ಡೋಸ್ 4 ಪಟ್ಟು ಪ್ರಭಾವಿ- ಸಂಶೋಧಕರು