-ಕಾಂಗ್ರೆಸ್‍ಗೆ ಜನರ ಹಿತಕಾಪಾಡುವ ಮನಸ್ಸು ಇದೆ ಅಂತ ಅಂದುಕೊಳ್ತೀನಿ
ಬೆಂಗಳೂರು: ಕೊರೊನಾದ ಈ ಅಲೆ ದೀರ್ಘ ಕಾಲ ಇರೋದಿಲ್ಲ. ವೇಗವಾಗಿ ಹರಡುತ್ತೆ, ಬೇಗ ಮುಕ್ತಾಯ ಆಗುತ್ತೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದ್ರು ಯಾರು ಆತಂಕ ಪಡುವುದು ಬೇಡ ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗೋದು ಕಡಿಮೆ. ಗಂಟಲಲ್ಲಿ ಮಾತ್ರ ಇದು ಇರುತ್ತೆ. ಹೀಗಾಗಿ ಯಾರು ಆತಂಕ ಪಡಬೇಡಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
Advertisement
ಓಮಿಕ್ರಾನ್ ಎರಡು ಡೋಸ್ ಲಸಿಕೆ ಪಡೆದವರ ಮೇಲೆ ಪ್ರಭಾವ ಕಡಿಮೆ ಇರುತ್ತೆ. ಹೀಗಾಗಿ ಜನ ಎರಡು ಡೋಸ್ ಲಸಿಕೆ ಪಡೆಯಬೇಕು. 15-18 ವಯಸ್ಕರಿಗೆ ನಿನ್ನೆ 3 ಲಕ್ಷ 50 ಸಾವಿರ ಲಸಿಕೆ ಕೊಟ್ಟಿದ್ದೇವೆ. ದೇಶದಲ್ಲಿ ಲಸಿಕೆ ನಿಡೋದ್ರಲ್ಲಿ 3ನೇ ಸ್ಥಾನದಲ್ಲಿ ಇದ್ದೇವೆ. ಈಗಾಗಲೇ 25% ಲಸಿಕೆ ಮಕ್ಕಳಿಗೆ ಕೊಡಲಾಗಿದೆ. 28 ದಿನಗಳು ಆದ ಮೇಲೆ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಕೊಡುತ್ತೇವೆ. ಕೋವ್ಯಾಕ್ಸಿನ್ ಮಾತ್ರ ಎರಡನೇ ಡೋಸ್ ಲಸಿಕೆ ಕೊಡಲಾಗುತ್ತೆ. ಲಸಿಕೆ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತೆ. 10-15 ದಿನಗಳಲ್ಲಿ ಎಲ್ಲಾ ಮಕ್ಕಳಿಗೂ ಮೊದಲ ಡೋಸ್ ಲಸಿಕೆ ಕೊಡುವ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಕೋವಿಡ್-19 ಕೇಸ್!
Advertisement
We have vaccinated 7.96 lakh children (15-17 years) in just TWO days! That is 25% of the total target population of 31 lakh in this age group.
Hopeful of completing this in the next week to 10 days.@BSBommai @mansukhmandviya @narendramodi pic.twitter.com/NMktXIFhZ4
— Dr Sudhakar K (@mla_sudhakar) January 5, 2022
Advertisement
60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಜನವರಿ 10 ರಿಂದ ಕೊಡುತ್ತೇವೆ. ಕೊರೊನಾ ವಾರಿಯರ್ಸ್‍ಗೆ 3ನೇ ಡೋಸ್ ಲಸಿಕೆ ಕೊಡ್ತೀವಿ. ಫ್ರಂಟ್ ಲೈನ್ ವಾರಿಯರ್ಸ್‍ಗೂ 3ನೇ ಡೋಸ್ ಲಸಿಕೆ ಕೊಡುತ್ತೇವೆ. ಜನರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಮುಖ್ಯ. ಆರೋಗ್ಯದ ತುರ್ತು ಪರಿಸ್ಥಿತಿ ಇರುವುದರಿಂದ ಜನರು, ರಾಜಕೀಯ ಪಕ್ಷಗಳು ಸಹಕಾರ ಕೊಡಬೇಕು. ಜನಸಾಮಾನ್ಯರು 4 ರಿಂದ 6 ವಾರಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು. ಈ ಅಲೆ ಬೇಗ ಹರಡಿದ್ದರೂ ಅಷ್ಟೇ ವೇಗವಾಗಿ ಕಡಿಮೆ ಆಗುತ್ತದೆ. ಈಗಾಗಲೇ ಬೇರೆ ದೇಶಗಳನ್ನು ಗಮನಿಸಿದರೆ ಹೀಗೆ ಇದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಆರ್ಸಿಬಿ ಆಟಗಾರ ಗ್ಲೇನ್ ಮ್ಯಾಕ್ಸ್‌ವೆಲ್‌ಗೆ ಕೊರೊನಾ ಪಾಸಿಟಿವ್
Advertisement
ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾತನಾಡಿ, ಕಾಂಗ್ರೆಸ್‍ಗೆ ಜನರ ಹಿತಕಾಪಾಡುವ ಮನಸ್ಸು ಇದೆ ಅಂತ ಅಂದುಕೊಳ್ಳುತ್ತೇನೆ. ಹೀಗಾಗಿ ಪಾದಯಾತ್ರೆ ಮಾಡಬೇಕಾ ಅಂತ ಯೋಚನೆ ಮಾಡಲಿ. ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು. ಜನರು ಎಲ್ಲಾ ನೋಡ್ತಿದ್ದಾರೆ. ಎಲ್ಲವನ್ನು ಜನ ಅರ್ಥ ಮಾಡಿಕೊಳ್ತಾರೆ. ಕಾಂಗ್ರೆಸ್ ನಾಯಕರು ದೀರ್ಘಕಾಲ ಆಡಳಿತ ಮಾಡಿದ್ದಾರೆ. ಸಿಎಂ, ಮಂತ್ರಿ ಆದವರು ಅ ಪಕ್ಷದಲ್ಲಿ ಇದ್ದಾರೆ. ಜನರ ಹಿತದೃಷ್ಟಿಯಿಂದ ಅವರು ನಿರ್ಧಾರ ಮಾಡ್ತಾರೆ ಅಂತ ಅಂದುಕೊಡಿದ್ದೇನೆ. ಅವರ ಹಠ ಮುಂದುವರಿಸಿದರೆ ಕಾನೂನು ಪ್ರಕಾರ ಕ್ರಮ ಆಗುತ್ತೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಿಕ್ಸಿಂಗ್ ಡೋಸ್ 4 ಪಟ್ಟು ಪ್ರಭಾವಿ- ಸಂಶೋಧಕರು