ಕರ್ನಾಟಕ ಜಂಗಲ್ ರಾಜ್ಯ ಆಗಿದೆ – ಬೀದರ್ ಗುಂಡಿನ ದಾಳಿಗೆ ಬೊಮ್ಮಾಯಿ ದಿಗ್ಭ್ರಮೆ

Public TV
2 Min Read
Basavaraj Bommai 1

ಬೆಂಗಳೂರು: ರಾಜ್ಯ ಜಂಗಲ್ ಆಗಿದೆ, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದರ್ (Bidar) ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ದಲ್ಲಿ ಪ್ರತಿಕಿಯಿಸಿದ್ದು, ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು, ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

ಬೊಮ್ಮಾಯಿ ಎಕ್ಸ್‌ದಲ್ಲಿ ಏನಿದೆ?
ಬೀದರ್‌ನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ.

ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ.ಇದನ್ನೂ ಓದಿ: ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

Share This Article