Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕವೇ ಮುಂದು – ರಾಜ್ಯಪಾಲರ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕವೇ ಮುಂದು – ರಾಜ್ಯಪಾಲರ ಮೆಚ್ಚುಗೆ

Bengaluru City

ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕವೇ ಮುಂದು – ರಾಜ್ಯಪಾಲರ ಮೆಚ್ಚುಗೆ

Public TV
Last updated: July 24, 2022 9:29 pm
Public TV
Share
2 Min Read
d96a2ebd 7d97 47ab b140 7357e7066325
SHARE

ಬೆಂಗಳೂರು: ಕರ್ನಾಟಕ ರಾಜ್ಯವು ಗುಣಮಟ್ಟದ ತಾಂತ್ರಿಕ ಹಾಗೂ ಉದ್ಯೋಗ ಆಧಾರಿತ ಶಿಕ್ಷಣ ಒದಗಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಹಾಗೂ ಬೆಂಗಳೂರು ಪ್ರಸ್ತುತ ಶಿಕ್ಷಣದ ಕೇಂದ್ರವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ತಾವರೆಕೆರೆ ಯೆಲ್ಲಾಚಗುಪ್ಪೆ ಗ್ರಾಮದಲ್ಲಿ ಬಂಟ್ಸ್ ಸಂಘ ಬೆಂಗಳೂರು ವತಿಯಿಂದ ಹೊಸದಾಗಿ ನಿರ್ಮಿಸಲಾದ ಆರ್‌ಎನ್‌ಎಸ್ ವಿದ್ಯಾನಿಕೇತನ ಕ್ಯಾಂಪಸ್-2 2ನೇ ಲಾಂಛನ ಹಾಗೂ ಫಲಕವನ್ನು ಅನಾವರಣಗೊಳಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

a818adb8 38ef 4bff 9f9d b94c8ef81161

ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಆರ್‌ಎನ್‌ಎಸ್ ಶಿಕ್ಷಣ ಸಂಸ್ಥೆ, ಸುಮಾರು 9 ಎಕರೆ ಪ್ರದೇಶದಲ್ಲಿ, ಮಾಲಿನ್ಯ ಮುಕ್ತ ಪರಿಸರದಲ್ಲಿ ಅತ್ಯಾಧುನಿಕತೆಯಿಂದ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದರೊಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ, ಕ್ರೀಡೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುತ್ತೀರಿ. ನೀವು ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದೀರಿ ಎಂದು ಶ್ಲಾಘಿಸಿದ್ದಾರೆ.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ಅಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳನ್ನು ಬಳಸಿಕೊಂಡು ನೀವು ಶ್ರೇಷ್ಠ ಭಾರತ, ನವ ಭಾರತ- ನವ ಕರ್ನಾಟಕ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಬಹುದು. ಈ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಯಸ್ಸಿನ ಮಿತಿಯಿಂದಾಗಿ 33 ಲಕ್ಷ ಪ್ಯಾಕೇಜ್‌ನ ಅಮೆರಿಕದ ಉದ್ಯೋಗ ಕಳೆದುಕೊಂಡ 15ರ ಬಾಲಕ

02 3

ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಅಸಮತೋಲನದಿಂದಾಗಿ ನಾವಿಂದು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯು ಪರಿಸರ ಸಂರಕ್ಷಣೆಯ ಬಗ್ಗೆ ಯೋಚಿಸುವಂತೆ ಒತ್ತಾಯಿಸಿದೆ. ಹಾಗಾಗಿ ಪ್ರಕೃತಿಯ ಬಗ್ಗೆ ಪ್ರೀತಿ ಗೌರವ, ಸರಳ ಜೀವನ ವಿಧಾನ ಹಾಗೂ ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು ಎಂದು ಕರೆ ನೀಡಿದ್ದಾರೆ.

03 2

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೇ ಇಡೀ ಮಾನವಕುಲಕ್ಕೆ ಪ್ರಯೋಜನ ನೀಡುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸುಭುದೇಂದ್ರ ಸ್ವಾಮೀಜಿ, ಸಚಿವರಾದ ಸಿ.ಟಿ.ರವಿ, ಜಿತೇಂದ್ರ ಗೆಹ್ಲೋಟ್, ಬಂಟರ ಸಂಘ ಹಾಗೂ ಆರ್‌ಎನ್‌ಎಸ್ ವಿದ್ಯಾನಿಕೇತನ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಕರ್ನಾಟಕದ ಮಾಜಿ ಲೋಕಾಯುಕ್ತ, ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಮಿಸೆಸ್ ಇಂಡಿಯಾ-2022 ಸಿನಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:CT RaviEducation CentregovernorNEPP. Vishwanath ShettySini Shettythawar chand gehlotಎನ್‌ಇಪಿಥಾವರ್‌ಚಂದ್ ಗೆಹ್ಲೋಟ್ಪಿ.ವಿಶ್ವನಾಥ್ ಶೆಟ್ಟಿರಾಜ್ಯಪಾಲರುಶಿಕ್ಷಣ ಕೇಂದ್ರಸಿ.ಟಿ ರವಿಸಿನಿ ಶೆಟ್ಟಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
4 minutes ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
14 minutes ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
15 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
1 hour ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
1 hour ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?