ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಧಾನಿ (Narendra Modi) ಆರೋಪಕ್ಕೆ ಯಾವ ಕಾನೂನು ಹದಗೆಟ್ಟಿದೆ ಎಂದು ಅವರೇ ಹೇಳಬೇಕು. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಸುರಕ್ಷಿತವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಬೆಂಗಳೂರು (Bengaluru) ಬಗ್ಗೆ ಹೇಳಿದರು. ವಿಶ್ವದ ನಾಯಕರು ಬೆಂಗಳೂರಿಗೆ ಬಂದು ದೆಹಲಿಗೆ ಹೋಗುತ್ತಾರೆ. ಅವರಿಗೆ ನಮ್ಮ ರಾಜ್ಯದಲ್ಲಿ ಮತ ಬರಲಿಲ್ಲ ಎಂದು ಈ ರೀತಿ ಮಾತನಾಡಿದ್ದಾರೆ. ಪ್ರಧಾನಿ ಆರೋಪ ಸರಿಯಿಲ್ಲ. ಉತ್ತಮ ಆಡಳಿತ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ
ಪ್ರಜ್ವಲ್ ಪೆನ್‌ಡ್ರೈವ್ ತನಿಖೆ ಬಗ್ಗೆ ಹೆಚ್‌ಡಿಕೆ ಸ್ವಾಗತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ನನ್ನ ವಶದಲ್ಲಿ ಇಲ್ಲ. ಈಗೇನಿದ್ದರೂ ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳುವ ಕೆಲಸ ಮಾಡಿದ್ದಾರೆ. ಬಿಜೆಪಿಯ (BJP) ನಿಲುವು ಏನು ಎಂಬುದು ನನ್ನ ಪ್ರಶ್ನೆಯಾಗಿದೆ. ಕುಮಾರಸ್ವಾಮಿ ಕುಟುಂಬ, ಪಕ್ಷದ ಬಗ್ಗೆ ಏನು ಬೇಕಾದರೂ ಹೇಳಲಿ. ಬಿಜೆಪಿಯ ನಿಲುವು ಏನು ಎಂಬುದು ನಮ್ಮ ಪ್ರಶ್ನೆಯಾಗಿದೆ. ಶೆಟ್ಟರ್, ಮಂಗಳಾ ಅಂಗಡಿ ಬಗ್ಗೆ ಬಿಜೆಪಿ ನಾಯಕರಿಗೆ ಕೇಳಿ. ನಿಮ್ಮ ನಿಲುವು ಏನು ಎಂದು ಪ್ರಶ್ನೆ ಮಾಡಬೇಕು. ಜೆಡಿಎಸ್ ಶಾಸಕ ಪತ್ರದ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಬಿಜೆಪಿ ಮೈತ್ರಿಯ ನಿಲುವು ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನಕ್ಕೆ ನೀರಸ ಪ್ರತಿಕ್ರಿಯೆ- ಗ್ರಾಮ ಖಾಲಿ ಖಾಲಿ
ಇನ್ನೂ ಶ್ರೀನಿವಾಸ್ ಪ್ರಸಾದ್ (Srinivasa Prasad) ನಿಧನದ ಕುರಿತು ಮಾತನಾಡಿ, ವಿಚಾರ ತಿಳಿದ ಬಳಿಕ ದು:ಖ ಆಗಿದೆ. ನಾನು ಅವರ ಕೈ ಕೆಳಗೆ ಕೆಲಸ ಮಾಡಿದ್ದೆ. ರಾಜೀವ್ ಗಾಂಧಿ ಕಾಲದಲ್ಲಿ ನನಗೆ ಸಹಾಯ ಮಾಡಿದ್ದರು. ನಾವೆಲ್ಲ ಜೊತೆಗೆ ಒಂದೇ ಹಾಸ್ಟೆಲ್‌ನಲ್ಲಿ ಇದ್ದೆವು. ಅನೇಕ ವರ್ಷಗಳ ಕಾಲ ಒಟ್ಟಿಗೆ ರಾಜಕೀಯ ಮಾಡಿಕೊಂಡು ಬಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? – ಪೆನ್‌ಡ್ರೈವ್ ಕೇಸ್ ಬಗ್ಗೆ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್
ಶ್ರೀನಿವಾಸ್ ಪ್ರಸಾದ್ ಭಿನ್ನಾಭಿಪ್ರಾಯದಿಂದ ಬೇರೆ ಪಕ್ಷಕ್ಕೂ ಹೋಗಿದ್ದರು. ಬಳಿಕ ಜೊತೆಗೆ ಸಂಪುಟದಲ್ಲಿ ಕೆಲಸ ಮಾಡಿದ್ದೇವೆ. ಓರ್ವ ಧೀಮಂತ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಜೊತೆಗೆ ಇದ್ದ ವ್ಯಕ್ತಿಯಾಗಿದ್ದರು. ಮೈಸೂರು ಭಾಗದಲ್ಲಿ ಪ್ರಭಾವಿ ಆಗಿದ್ದರು. ಬಳ್ಳಾರಿ ಸಮಾವೇಶದ ಬಳಿಕ ನಾನು ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ