– ಬೆಳಗಾವಿ ರಾಣಿ ಚನ್ನಮ್ಮ, ಧಾರವಾಡ, ಗುಲ್ಬರ್ಗ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
– ಜಮ್ಮುವಿನಲ್ಲಿ ಪ್ರಧಾನಮಂತ್ರಿ ಉಷಾ ಯೋಜನೆಗೆ ಚಾಲನೆ; ನೇರ ಪ್ರಸಾರದಲ್ಲಿ ಸಚಿವ ಪ್ರಹ್ಲಾದ್ ಜೋಶಿ, ಸಂಸದೆ ಮಂಗಳಾ ಅಂಗಡಿ ಭಾಗಿ
Advertisement
ಬೆಳಗಾವಿ: ಕರ್ನಾಟಕ (Karnataka), ಜಮ್ಮು-ಕಾಶ್ಮೀರ (Jammu and Kashmir) ಸೇರಿದಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಗೆ (University) ಕೇಂದ್ರ ಸರ್ಕಾರ 3600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
Advertisement
ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅನುದಾನ ನೀಡಿದ್ದಾರೆ. ಇಂದು ಅದರ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 2013ರ ಸಿದ್ದರಾಮಯ್ಯ ಬೇರೆ, 2024 ಸಿದ್ದರಾಮಯ್ಯ ಬೇರೆ: ಎನ್.ಹೆಚ್ ಶಿವಶಂಕರ ರೆಡ್ಡಿ
Advertisement
Advertisement
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ದೊರೆಯಲಿದೆ. ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಮೋದಿಯವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಈ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಅಭಿವೃದ್ಧಿಗೆ ಐತಿಹಾಸಿಕ ಕ್ರಮ ಜಮ್ಮು- ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗ ಅದು ಸಂಪೂರ್ಣ ಬದಲಾಗಿದೆ. ಅಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮೋದಿಯವರು ಇಂದು ಅಲ್ಲಿಂದಲೇ ಚಾಲನೆ ನೀಡಲಿದ್ದಾರೆ. ನಾನು ಮತ್ತು ಸಂಸದೆ ಮಂಗಳಾ ಅಂಗಡಿ ಅವರು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಮಲ್‌ನಾಥ್ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್ ಸಿಂಗ್