BelgaumLatestLeading NewsMain Post

ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ (Anand Mamani) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಆನಂದ ಮಾಮನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆನಂದ ಮಾಮನಿ ಆರೋಗ್ಯ ಸ್ಥಿರವಾಗಿದೆ. ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ತಡರಾತ್ರಿ ಆನಂದ ಮಾಮನಿಗೆ ಕರೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆರೋಗ್ಯ ವಿಚಾರಿಸಿದರು. ಮಾಮನಿಯವರು ಚೇತರಿಸಿಕೊಳ್ಳುತ್ತಿದ್ದು, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ

Live Tv

Leave a Reply

Your email address will not be published.

Back to top button