ಬೆಳಗಾವಿ: ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡಿಸಲಾಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇತಿದ್ದುಪಡಿ) ವಿಧೇಯಕ ಮಂಡಿಸಿದರು.
Advertisement
ಹಲವು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಸಾಕಷ್ಟು ರೈತರು ಮಾಹಿತಿ ಇಲ್ಲದ ಕಾರಣ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಅಂತಹ ರೈತರಿಗೆ ನಿಯಮಾನುಸಾರ ಅರ್ಹ ರೈತರು ಅರ್ಜಿ ಸಲ್ಲಿಸಲು ಒಂದು ವರ್ಷ ಅವಧಿ ವಿಸ್ತರಿಸಲು ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಎಕರೆಯಷ್ಟು ಇನಾಮು ಭೂಮಿ ಇದ್ದು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಸರಿಯಾದ ಪಹಣಿ ಇಲ್ಲದ ಕಾರಣ ರೈತರಿಗೆ ಬ್ಯಾಂಕ್‌ಗಳಲ್ಲಿ ಸಾಲ ಸಿಗುತ್ತಿಲ್ಲ. ಸರ್ಕಾರಿ ಯೋಜನೆಗಳಿಗೆ ಭೂಸ್ವಾಧೀನವಾದರೆ ಪರಿಹಾರ ಸಿಗದೆ ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಹೀಗಾಗಿ ಈ ವಿಧೇಯಕದಿಂದ ಅನುಕೂಲವಾಗಿದೆ.
Advertisement
ಇನ್ನು ಸರ್ಕಾರಿ ಸರ್ವೇಯರಗಳು ಅಸ್ತಿಗಳ ವಿಭಜನೆಗೆ ನಕ್ಷೆ (11ಇ ಸ್ಕೆಚ್), ಭೂಪರಿವರ್ತನೆ ಪೋಡಿ ಮಾಡುವ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ ಸಂಬಂಧ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿದೆ. ಪ್ರಸ್ತುತ ಈ ಕಾರ್ಯವನ್ನು ಪರವಾನಗಿ ಪಡೆದ ಸರ್ವೇಯರ್ ಮಾತ್ರ ಮಾಡುತ್ತಿದ್ದಾರೆ. ವಿಧೇಯಕದಲ್ಲಿ ಸರ್ಕಾರಿ ಸರ್ವೇಯರ್‌ಗಳಿಗೂ ಅವಕಾಶ ಕೊಡಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?
Advertisement
Advertisement
ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ದರವನ್ನು ನಿಗದಿಪಡಿಸಲು ಅನುಕೂಲವಾಗುವ ಕರ್ನಾಟಕ ನಗರ ಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕೈಗಾರಿಕೆಗಳಿಗೆ ಆಸ್ತಿ ತೆರಿಗೆಯನ್ನು ವಾಣಿಜ್ಯ ಕಟ್ಟಡಗಳಿಗಿಂತ ಕಡಿಮೆ ವಿಧಿಸಿದರೆ ರಾಜ್ಯದಲ್ಲಿ ಕೈಗಾರಿಕೆಗಳ ಉತ್ತೇಜನ ಮತ್ತು ಸ್ಥಾಪನೆಗೆ ಅನುಕೂಲವಾಗುತ್ತದೆ. ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾದರೆ ಸ್ಥಳೀಯವಾಗಿ ಉದ್ಯೋಗವಕಾಶಗಳು ಹೆಚ್ಚಾಗಲಿವೆ. ಅದಾಯವು ಸಹ ಗಣನೀಯವಾಗಿ ಹೆಚ್ಚಳವಾಗಲಿದೆ ಎಂಬ ಉದ್ದೇಶದಿಂದ ವಿಧೇಯಕನ್ನು ಮಂಡಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!