ಬೆಂಗಳೂರು: ವಿಧಾನಸಭೆ ಚುನಾವಣೆಯಷ್ಟೇ ಹೈಪ್ ಕ್ರಿಯೇಟ್ ಮಾಡಿದ್ದ 20 ಜಿಲ್ಲೆಗಳ 25 ಸ್ಥಾನಗಳ ವಿಧಾನಪರಿಷತ್ ಚುನಾವಣೆ ಮುಕ್ತಾಯವಾಗಿದೆ. ಮತಪೆಟ್ಟಿಗೆಯಲ್ಲಿ 90 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಈಗ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದ್ದು, ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement
ಸುಗಮ ಚುನಾವಣೆಗಾಗಿ 20 ಜಿಲ್ಲೆಗಳಲ್ಲಿ 6,073 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಸಣ್ಣ ಪುಟ್ಟ ಘಟನೆ ಹೊರತುಪಡಿಸಿದರೆ ಉಳಿದಂತೆ ಶಾಂತಿಯುತ ಮತದಾನ ನಡಿಯಿತು. ಹಾವೇರಿಯ ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಲ್ಲಿ ಯಡಿಯೂರಪ್ಪ, ಬಾದಾಮಿಯಲ್ಲಿ ಸಿದ್ದರಾಮಯ್ಯ, ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಇತರೆ ನಾಯಕರು ಅವರವರ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಕೋವಿಡ್ ವ್ಯಾಕ್ಸಿನೇಷನ್
Advertisement
Advertisement
ಕಲಬುರಗಿ ಸಂಸದ ಉಮೇಶ್ ಜಾಧವ್ ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿ ಬಿಜೆಪಿಗೆ ಮತ ಹಾಕಿದ್ದೇನೆ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ವಿವಾದ ಆಗುತ್ತಲೇ, ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಚಿತ್ರದುರ್ಗದ ಕೆಲ ಗ್ರಾಮ ಪಂಚಾಯತ್ ಸದಸ್ಯರು ನನ್ನ ಮತ ಮಾರಾಟಕ್ಕಿಲ್ಲ, ಬಿಜೆಪಿಗೆ ಮತ ನೀಡಿದ್ದೇವೆ ಎಂದು ವೀಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಎಂ.ಬಿ ಪಾಟೀಲ್ ಕಾಲೇಜಿನ ಉಪನ್ಯಾಸಕರನ್ನು ಮತಗಟ್ಟೆ ಏಜೆಂಟ್ ಮಾಡಲಾಗಿದೆ ಎಂದು ಬಾಗಲಕೋಟೆಯ ಚಿಕ್ಕಪಡಸಲಗಿಯಲ್ಲಿ ಪಕ್ಷೇತರ ಅಭ್ಯರ್ಥಿ ಆರೋಪಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದವರಿಗೆ ಹೊಸ ಗೈಡ್‌ಲೈನ್ಸ್
Advertisement
ಕೋಲಾರ ಮತಕೇಂದ್ರದ ಒಳಕ್ಕೆ ಮೊಬೈಲ್ ಬಿಟ್ಟಿದ್ದಕ್ಕೆ ಜಿಲ್ಲಾಧಿಕಾರಿ, ನಗರಸಭೆ ಆಯುಕ್ತರು, ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು. ಬೀದರ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲಿಗ ಎನ್ನಲಾದ ವ್ಯಕ್ತಿಯ ಕಾರಿನಲ್ಲಿ ಮದ್ಯದ ಬಾಟಲ್‍ಗಳು ಪತ್ತೆಯಾಯಿತು ಇದು ವಾಕ್ಸಮರಕ್ಕೆ ಕಾರಣವಾಯಿತು. ಇದನ್ನೂ ಓದಿ: 2 ಡೋಸ್ ಲಸಿಕೆ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಲು ICMR ಅನುಮತಿ?