-ಬಸವರಾಜ್ ಹೊರಟ್ಟಿ ಮೇಲೆ ಸಿಎಂ ಕೃಪಾಕಟಾಕ್ಷ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನದ ವಿಚಾರವು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ತಲೆನೋವಾಗಿದೆ. ಆದರೆ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೆಂಬಲವಿದ್ದು ಅವರೇ ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 12ರಂದು ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ಬಸವರಾಜ ಹೊರಟ್ಟಿ ಅವರಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಸವರಾಜ ಹೊರಟ್ಟಿ ಅವರು ಹಂಗಾಮಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಡಿಸೆಂಬರ್ 11ರಂದು ಬೆಳಗ್ಗೆ ಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
Advertisement
Advertisement
ಕಾಂಗ್ರೆಸ್‍ನ ಎಸ್.ಆರ್.ಪಾಟೀಲ್ ಅವರು ಕೂಡ ಸಭಾಪತಿ ಸ್ಥಾನಕ್ಕೆ ಪ್ರಬಲ ಆಕಾಕ್ಷಿಯಾಗಿದ್ದಾರೆ. ಇದು ದೋಸ್ತಿ ಪಕ್ಷಗಳಲ್ಲಿ ಸ್ವಲ್ಪ ತಲೆನೋವು ತಂದಿದೆಯಂತೆ. ಗೊಂದಲ ಬಗೆಹರಿಸಲು ಮೈತ್ರಿ ಪಕ್ಷಗಳ ನಡುವೆ ಸೋಮವಾರ ಮಾತುಕತೆ ನಡೆಯಲಿದೆ ಎನ್ನಲಾಗಿದ್ದು, ಸಭಾಪತಿ ಸ್ಥಾನ ಯಾರಿಗೆ ಕೊಡಬೇಕೆಂದು ಅಂತಿಮಗೊಳಿಸುವ ಸಾಧ್ಯತೆಯಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv