ಬಳ್ಳಾರಿ: ಜಿಲ್ಲೆಯ ಕುಡತಿನಿ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದರೆ, ಕೊಟ್ಟೂರು ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಡೂರಿನ ತಾಲೂಕಿನ ಕುಡತಿನಿ ಪಟ್ಟಣ ಪಂಚಾಯತಿಗೆ ನಡೆದ 19 ವಾರ್ಡ್ ಗಳ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗಳಿಸಿದ್ರೆ ಬಿಜೆಪಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಮಾತ್ರ ಬಿಜೆಪಿಗೆ ದಕ್ಕಿದೆ.
Advertisement
Advertisement
ಮೊದಲ ಬಾರಿಗೆ ನಡೆದ ಕುಡತಿನಿ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಎಸ್ ಟಿ ಪಂಗಡಕ್ಕೆ ಮೀಸಲಾದ್ರೆ, ಉಪಾಧ್ಯಕ್ಷ ಸ್ಥಾನ ಎಸ್‍ಸಿ ಮಹಿಳೆಗೆ ಮೀಸಲಾಗಿದೆ. ಕಾಂಗ್ರೆಸ್ 19 ವಾರ್ಡಗಳ ಪೈಕಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ರೂ ಎಸ್ ಟಿ/ ಎಸ್‍ಸಿ ಪಂಗಡದ ಅಭ್ಯರ್ಥಿಗಳು ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಜೆಪಿಯಿಂದ ಗೆದ್ದಿರುವ ಎಸ್ ಸಿ/ ಎಸ್ ಟಿ ಪಂಗಡದ ಅಭ್ಯರ್ಥಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಲಭಿಸುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಹಿಡಿಯಲಾಗದೇ ಕೈ ಕೈ ಹಿಸುಕಿಕೊಳ್ಳುವಂತಾಗಿದೆ.
Advertisement
Advertisement
ಕೊಟ್ಟೂರು ಪಟ್ಟಣ ಪಂಚಾಯತಿಯ 20 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 8, ಹಾಗೂ 3 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧಿಕಾರಕ್ಕೆ ಏರಲು 11 ಸ್ಥಾನಗಳು ಬೇಕಾದ ಹಿನ್ನೆಲೆಯಲ್ಲಿ ಪಕ್ಷೇತರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕುಡತಿನಿ ಹಾಗೂ ಕೊಟ್ಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಗೆದ್ದ ಅಭ್ಯರ್ಥಿಗಳು ಪಟಾಕಿ ಸಿಡಿಸಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv