ಚಾಮರಾಜನಗರ: ಕೊಳ್ಳೇಗಾಲ ಮತ್ತು ಚಾಮರಾಜನಗರ ನಗರಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
ಚಾಮರಾಜನಗರ ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನಗಳನ್ನ ಗೆಲ್ಲುವ ಮೂಲ ಅತೀದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ 8 ಸ್ಥಾನವನ್ನ ಪಡೆದು ಕೊಳ್ಳುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡಿದೆ. ಉಳಿದಂತೆ ಎಸ್‍ಡಿಪಿಐ 6, ಬಿಎಸ್‍ಪಿ 1 ಮತ್ತು ಪಕ್ಷೇತರವಾಗಿ 1 ಇಬ್ಬರು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಇದರೊಂದಿಗೆ ಎರಡನೇ ಬಾರಿಗೆ ಚಾಮರಾಜನಗರ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಂತಾಗಿದೆ. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು 1 ಸ್ಥಾನದ ಅವಶ್ಯಕತೆ ಇದ್ದು ಏನೂ ಮಾಡಲಿದೆ ಎನ್ನುವುದು ಸದ್ಯದ ಕುತೂಹಲ. ಕಾಂಗ್ರೆಸ್ ಹೀನಾಯ ಸ್ಥಿತಿ ಅನುಭವಿಸಿದ್ದು ಸಚಿವ ಸಿ.ಪುಟ್ಟರಂಗಶೆಟ್ಟಿ ಭಾರೀ ಮುಖಭಂಗ ಅನುಭವಿಸಿದ್ದಾರೆ.
ಕೊಳ್ಳೇಗಾಲ ನಗರಸಭೆಯ 30 ಸ್ಥಾನಗಳ ಪಲಿತಾಂಶ ಹೊರ ಬಂದಿದೆ. ಇವುಗಳಲ್ಲಿ 11 ಸ್ಥಾನವನ್ನ ಪಡೆದ ಕಾಂಗ್ರೆಸ್ ಪ್ರಥಮ ಸ್ಥಾನ ಪಡೆದು ಕೊಂಡಿದೆ. ಬಿಎಸ್ ಪಿ 9 ಸ್ಥಾನ ಪಡೆದು ಕೊಳ್ಳುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡಿದೆ. ಉಳಿದಂತೆ ಬಿಜೆಪಿ 6, ಪಕ್ಷೇತರವಾಗಿ 4 ಮಂದಿ ಆಯ್ಕೆಯಾಗಿ ಅತಂತ್ರ ನಗರಸಭೆ ನಿರ್ಮಾಣ ಆಗಿದೆ. ಕಳೆದ ಬಾರಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವ ಮೂಲಕ ಅಧಿಕಾರ ನಡೆಸಿತ್ತು. ಈ ಬಾರಿ 9 ಸ್ಥಾನ ಕಳೆದು ಕೊಂಡಿದೆ. ಕಾಂಗ್ರೆಸ್ ಮತ್ತು ಬಿಎಸ್ ಪಿ ಒಟ್ಟು ಸೇರಿ ಅಧಿಕಾರ ನಡೆಸುವ ಸಾಧ್ಯತೆ ದಟ್ಟವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv