ಮೈಸೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 62 ವಾರ್ಡ್‌ಗಳಲ್ಲಿ 22 ಸ್ಥಾನಗಳನ್ನು ಪಡೆದಿರುವುದು ಉತ್ತಮ ಸಾಧನೆಯಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದ್ದರೂ ನಮಗೆ ಮೈಸೂರಿನ ಜನ ಬೆಂಬಲ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ನಡೆದ ಚುನಾವಣೆಯಲ್ಲಿ 62 ವಾರ್ಡ್‌ಗಳಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಬಂಡಾಯ ಅಭ್ಯರ್ಥಿ ಒಂದು ಕಡೆ ಗೆಲವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ ಒಟ್ಟು 23 ಸ್ಥಾನಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಒಟ್ಟಿಗೆ ಅಧಿಕಾರ ನಡೆಸುತ್ತಿರುವ ಸಂದರ್ಭದಲ್ಲೂ ಗೆದ್ದಿರುವುದು ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲೇ ಉತ್ತಮವಾದ ಸಾಧನೆಯಾಗಿದೆ ಎಂದರು.
ಜೆಡಿಎಸ್ ಮುಂದೆ ಈಗ ಆಯ್ಕೆ ಇದೆ. ಅವರು ಯಾರ ಜೊತೆ ಹೋಗುತ್ತಾರೆ ಎಂಬುದನ್ನ ಅವರೇ ತೀರ್ಮಾನಿಸಲಿ. ಇಲ್ಲವಾದಲ್ಲಿ ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ಪಾಲಿಕೆಯಲ್ಲಿ ಈ ಹಿಂದೆ ಇದ್ದ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಆ ನಂತರ ಮಾತನಾಡುತ್ತೇನೆ. ಅವರ ಜೊತೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಸಂದರ್ಭ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ ಮೈಸೂರಿನಲ್ಲಿ ನಮ್ಮ ಸಾಧನೆ ಸಮಾಧಾನ ತಂದಿದೆ. ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ಅತಂತ್ರ ಫಲಿತಾಂಶ ನಿರ್ಮಾಣವಾಗಿದ್ದು ಬಿಜೆಪಿ 22ರಲ್ಲಿ ಜಯಗಳಿಸಿದರೆ, ಜೆಡಿಎಸ್ 18ರಲ್ಲಿ ಗೆದ್ದಿದೆ. ಕಾಂಗ್ರೆಸ್ 19, ಪಕ್ಷೇತರ 5, ಬಿಎಸ್‍ಪಿ 1 ಕ್ಷೇತ್ರದಲ್ಲಿ ಗೆಲುವು ಪಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv