ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಲೋಕಸಭಾ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಬಿವೈ ವಿಜಯೇಂದ್ರ
Advertisement
Advertisement
1ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
Advertisement
Advertisement
2ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (ಎಸ್ಸಿ), ಕಲಬುರಗಿ (ಎಸ್ಸಿ), ರಾಯಚೂರು (ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಮೊದಲ ಹಂತ
ಅಧಿಸೂಚನೆ ಪ್ರಕಟ – ಮಾ.28
ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.04
ನಾಮಪತ್ರ ಪರಿಶೀಲನೆ – ಏ.05
ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.08
ಮತದಾನ – ಏ.26
ಮತ ಎಣಿಕೆ – ಜೂನ್ 4
ಎರಡನೇ ಹಂತ
ಅಧಿಸೂಚನೆ ಪ್ರಕಟ – ಏ.12
ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.19
ನಾಮಪತ್ರ ಪರಿಶೀಲನೆ – ಏ.20
ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.22
ಮತದಾನ – ಮೇ 7
ಮತ ಎಣಿಕೆ – ಜೂನ್ 4
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು?
ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ